AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಆಟೋ ಚಾಲಕನ ರೌಡಿಸಂ: ಫಿಲ್ಮಿ ಸ್ಟೈಲ್‌ನಲ್ಲಿ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ!

ಬೆಂಗಳೂರಲ್ಲಿ ಆಟೋ ಚಾಲಕನ ರೌಡಿಸಂ: ಫಿಲ್ಮಿ ಸ್ಟೈಲ್‌ನಲ್ಲಿ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ!

ಶಿವಪ್ರಸಾದ್​ ಬಿ.
| Edited By: |

Updated on: Oct 17, 2026 | 8:59 AM

Share

ಬೆಂಗಳೂರಿನ ಸರ್ಜಾಪುರ ಮುಖ್ಯ ರಸ್ತೆಯಲ್ಲಿ ಆಟೋ ಚಾಲಕನೊಬ್ಬ ಫಿಲ್ಮಿ ಸ್ಟೈಲ್‌ನಲ್ಲಿ ಕಾರಿಗೆ ಅಡ್ಡಹಾಕಿ ದರ್ಪ ಮೆರೆದಿರುವ ಘಟನೆ ನಡೆದಿದೆ. ಏಕಾಏಕಿ ಟರ್ನ್ ತಗೆದುಕೊಂಡಾಗ ಹಾರ್ನ್ ಮಾಡಿದ ಕಾರಣಕ್ಕೆ ಕೋಪಗೊಂಡು ಕಾರನ್ನು ಚೇಸ್ ಮಾಡಿ ಬಂದ ಆಟೋ ಚಾಲಕ, ಅಸಭ್ಯ ಸನ್ನೆ ಮಾಡಿ ನಿಂದಿಸಿದ್ದಾನೆ. ಈ ಇಡೀ ಘಟನೆ ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದೆ.

ಬೆಂಗಳೂರು, ಅಕ್ಟೋಬರ್ 17: ಸರ್ಜಾಪುರ ಮುಖ್ಯ ರಸ್ತೆಯಲ್ಲಿ ಫಿಲ್ಮಿ ಸ್ಟೈಲ್‌ನಲ್ಲಿ ಆಟೋ ಚಾಲಕನೊಬ್ಬ ದರ್ಪ ಮೆರೆದಿದ್ದು, ಕಾರು ಚಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ. ಈ ಸಂಪೂರ್ಣ ಕೃತ್ಯ ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮುಖ್ಯ ರಸ್ತೆಯಲ್ಲಿ ಸಾಗುತ್ತಿದ್ದ ಆಟೋ ಚಾಲಕನೊಬ್ಬ ಏಕಾಏಕಿ ಟರ್ನ್ ತೆಗೆದುಕೊಂಡಾಗ, ಎಚ್ಚರಿಕೆಗಾಗಿ ಕಾರು ಚಾಲಕ ಹಾರ್ನ್ ಮಾಡಿದ್ದಾರೆ. ಇದರಿಂದ ಕುಪಿತಗೊಂಡ ಆಟೋ ಚಾಲಕ, ಕಾರನ್ನು ಸ್ವಲ್ಪ ದೂರದವರೆಗೆ ಬೆನ್ನಟ್ಟಿಕೊಂಡು (ಚೇಸ್ ಮಾಡಿಕೊಂಡು) ಬಂದು ಮಧ್ಯ ರಸ್ತೆಯಲ್ಲೇ ಕಾರಿಗೆ ಅಡ್ಡಗಟ್ಟಿದ್ದಾನೆ.

ನಂತರ ಕಾರಿನ ಹತ್ತಿರ ಬಂದು ಅಸಹ್ಯಕರ ಸನ್ನೆ ಮಾಡಿ, ಕಾರು ಚಾಲಕನ ಮೇಲೆ ಹಲ್ಲೆಗೆ ಮುಂದಾಗಿ ದರ್ಪ ತೋರಿದ್ದಾರೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಇಂತಹ ರೋಡ್ ರೇಜ್ ಪ್ರಕರಣಗಳಿಂದ ವಾಹನ ಸವಾರರು ಆತಂಕಗೊಂಡಿದ್ದು, ಇಂತಹ ದುರ್ವರ್ತನೆ ತೋರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More