AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!

ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!

ರಾಚಪ್ಪಾಜಿ ನಾಯ್ಕ್
| Edited By: |

Updated on: Jul 27, 2026 | 7:46 AM

Share

ನಗರದ ಬನ್ನೇರುಘಟ್ಟ ರಸ್ತೆಯಲ್ಲಿ ರಸ್ತೆ ಅಪಘಾತವೊಂದರ ಹಿನ್ನೆಲೆಯಲ್ಲಿ ಇನ್ನೋವಾ ಮತ್ತು ಸ್ವಿಫ್ಟ್ ಕಾರು ಚಾಲಕರ ನಡುವೆ ಸಿನಿಮಾ ಮಾದರಿಯ ಚೇಸಿಂಗ್ ಹಾಗೂ ಹೈಡ್ರಾಮಾ ನಡೆದಿದೆ. ಸ್ವಿಫ್ಟ್ ಕಾರಿಗೆ ಸ್ಪರ್ಶಿಸಿದ ಇನ್ನೋವಾ ಚಾಲಕ, ಸ್ವಿಫ್ಟ್ ಚಾಲಕನ ಕಾರಿನ ಕೀ ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣ ಜಾಗೃತನಾದ ಸ್ವಿಫ್ಟ್ ಚಾಲಕ, ಬೈಕ್ ಸವಾರನ ನೆರವು ಪಡೆದು ಇನ್ನೋವಾ ಕಾರನ್ನು ಚೇಸ್ ಮಾಡಿ ಹಿಡಿದಿದ್ದಾರೆ. ಈ ವೇಳೆ ಠಾಣೆಗೆ ಬರುವುದಾಗಿ ಹೇಳಿ ಇನ್ನೋವಾ ಚಾಲಕ ಮತ್ತೆ ರ್ಯಾಶ್ ಡ್ರೈವಿಂಗ್ ಮಾಡುತ್ತಾ ಎಸ್ಕೇಪ್ ಆಗಲು ಯತ್ನಿಸಿದಾಗ, ಮತ್ತೆ ಬೈಕ್‌ನಲ್ಲಿ ಬೆನ್ನಟ್ಟಿ ಕೊನೆಗೂ ಆತನನ್ನು ತಡೆಯಲಾಗಿದೆ. ಹುಳಿಮಾವು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಸಂಪೂರ್ಣ ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಬೆಂಗಳೂರು, ಜುಲೈ 27: ನಗರದ ಬನ್ನೇರುಘಟ್ಟ ರಸ್ತೆಯಲ್ಲಿ ರಸ್ತೆ ಅಪಘಾತವೊಂದರ ಹಿನ್ನೆಲೆಯಲ್ಲಿ ಇನ್ನೋವಾ ಮತ್ತು ಸ್ವಿಫ್ಟ್ ಕಾರು ಚಾಲಕರ ನಡುವೆ ಸಿನಿಮಾ ಮಾದರಿಯ ಚೇಸಿಂಗ್ ಹಾಗೂ ಹೈಡ್ರಾಮಾ ನಡೆದಿದೆ. ಸ್ವಿಫ್ಟ್ ಕಾರಿಗೆ ಸ್ಪರ್ಶಿಸಿದ ಇನ್ನೋವಾ ಚಾಲಕ, ಸ್ವಿಫ್ಟ್ ಚಾಲಕನ ಕಾರಿನ ಕೀ ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣ ಜಾಗೃತನಾದ ಸ್ವಿಫ್ಟ್ ಚಾಲಕ, ಬೈಕ್ ಸವಾರನ ನೆರವು ಪಡೆದು ಇನ್ನೋವಾ ಕಾರನ್ನು ಚೇಸ್ ಮಾಡಿ ಹಿಡಿದಿದ್ದಾರೆ. ಈ ವೇಳೆ ಠಾಣೆಗೆ ಬರುವುದಾಗಿ ಹೇಳಿ ಇನ್ನೋವಾ ಚಾಲಕ ಮತ್ತೆ ರ್ಯಾಶ್ ಡ್ರೈವಿಂಗ್ ಮಾಡುತ್ತಾ ಎಸ್ಕೇಪ್ ಆಗಲು ಯತ್ನಿಸಿದಾಗ, ಮತ್ತೆ ಬೈಕ್‌ನಲ್ಲಿ ಬೆನ್ನಟ್ಟಿ ಕೊನೆಗೂ ಆತನನ್ನು ತಡೆಯಲಾಗಿದೆ. ಹುಳಿಮಾವು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಸಂಪೂರ್ಣ ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us