AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ರಸ್ತೆ ಕಾಮಗಾರಿ ವಿಳಂಬ: ಗುತ್ತಿಗೆದಾರರು, ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣಭೈರೇಗೌಡ ಕ್ಲಾಸ್

ಬೆಂಗಳೂರು ರಸ್ತೆ ಕಾಮಗಾರಿ ವಿಳಂಬ: ಗುತ್ತಿಗೆದಾರರು, ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣಭೈರೇಗೌಡ ಕ್ಲಾಸ್

ಅರುಣ್ ಕುಮಾರ್​ ಆರ್​.
| Edited By: |

Updated on: Oct 26, 2026 | 2:26 PM

Share

ಬೆಂಗಳೂರು ರಸ್ತೆ ಕಾಮಗಾರಿ ವಿಳಂಬ ಮತ್ತು ಕಳಪೆ ಗುಣಮಟ್ಟದ ಕುರಿತು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು ಗುತ್ತಿಗೆದಾರರು ಮತ್ತು ಜಿಬಿಎ ಅಧಿಕಾರಿಗಳಿಗೆ ತೀವ್ರ ತರಾಟೆ ತೆಗೆದುಕೊಂಡರು. ಕಾಮಗಾರಿ ವಿಳಂಬದಿಂದ ಜನರಿಂದ ಟೀಕೆ ಎದುರಿಸಬೇಕಾಗಿದ್ದು, ಸರ್ಕಾರಕ್ಕೆ ತಲೆ ತಗ್ಗಿಸುವಂತಾಗಿದೆ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಅನಧಿಕೃತ ಕಟ್ಟಡ ನಿರ್ಮಾಣಗಳ ಬಗ್ಗೆಯೂ ಅವರು ಪ್ರಶ್ನಿಸಿದರು.

ಬೆಂಗಳೂರು, ಅಕ್ಟೋಬರ್ 26: ಬೆಂಗಳೂರಿನಲ್ಲಿ ರಸ್ತೆ ಕಾಮಗಾರಿಗಳಲ್ಲಿ ವಿಳಂಬ ಹಾಗೂ ಕಳಪೆ ಗುಣಮಟ್ಟದ ಕಾರ್ಯನಿರ್ವಹಣೆ ಗಮನಿಸಿದ ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಗುತ್ತಿಗೆದಾರರು ಮತ್ತು ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಅಧಿಕಾರಿಗಳನ್ನು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಸೋಮವಾರ ನಗರದಾದ್ಯಂತ ಸಂಚರಿಸಿ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವರು, ವೈಟ್ ಟಾಪಿಂಗ್ ಕಾಮಗಾರಿಗಳಲ್ಲಿನ ವಿಳಂಬದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

‘ನಿಮ್ಮ ತಪ್ಪಿಗೆ ನಾವು ಜನರಿಂದ ಬೈಸಿಕೊಳ್ಳಬೇಕಾಗಿದೆ. ರಸ್ತೆ ಕಾಮಗಾರಿ ಇಷ್ಟು ವಿಳಂಬವಾದರೆ ಜನರ ಮುಂದೆ ನಾವು ತಲೆ ತಗ್ಗಿಸಬೇಕಾಗುತ್ತದೆ’ ಎಂದು ಸಚಿವರು ಕಟುವಾಗಿ ಹೇಳಿದರು. ಸಾರ್ವಜನಿಕರಿಂದ ಬರುವ ಟೀಕೆಗಳನ್ನು ಸರ್ಕಾರ ಮತ್ತು ತಮ್ಮ ಮೇಲೆ ಹಾಕುತ್ತಿರುವುದಕ್ಕೆ ಅವರು ಬೇಸರ ವ್ಯಕ್ತಪಡಿಸಿದರು. 50-40 ಕೋಟಿ ರೂ.ಗಳ ರಸ್ತೆ ಯೋಜನೆಗಳಲ್ಲಿನ ಪ್ರಗತಿಯ ಕೊರತೆಯನ್ನು ಎತ್ತಿ ತೋರಿಸಿದರು. ಕಾಮಗಾರಿಗಳ ತ್ವರಿತ ಪೂರ್ಣಗೊಳಿಸುವಿಕೆಗೆ ಒತ್ತು ನೀಡಿದ ಸಚಿವರು, ವಿಳಂಬಕ್ಕೆ ಕಾರಣಗಳನ್ನು ಸ್ಪಷ್ಟಪಡಿಸುವಂತೆ ಅಧಿಕಾರಿಗಳನ್ನು ಆಗ್ರಹಿಸಿದರು. ಅಲ್ಲದೆ, ನಗರದಲ್ಲಿ ಅನುಮತಿ ಇಲ್ಲದೆ ನಿರ್ಮಿಸಲಾಗುತ್ತಿರುವ ಗಗನಚುಂಬಿ ಕಟ್ಟಡಗಳ ಬಗ್ಗೆಯೂ ಅವರು ಪ್ರಶ್ನಿಸಿ, ಇಂತಹ ಬೆಳವಣಿಗೆಗಳ ಮೇಲೆ ನಿಯಂತ್ರಣ ಸಾಧಿಸುವ ಅಗತ್ಯವನ್ನು ಪ್ರತಿಪಾದಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅರುಣ್ ಕುಮಾರ್​ ಆರ್​.
ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More