AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಗುಹೆ ತರನೇ ಆದ್ರೆ ಗುಹೆ ಅಲ್ಲ: ಬೆಂಗಳೂರಲ್ಲಿ ಜಿಬಿಎಯಿಂದ ಬೃಹತ್ ಗುಹೆ ಭಾಗ್ಯ; ಅಧಿಕಾರಿಗಳ ವಿರುದ್ಧ ಜನಾಕ್ರೋಶ

“ಇದು ಗುಹೆ ತರನೇ ಆದ್ರೆ ಗುಹೆ ಅಲ್ಲ”: ಬೆಂಗಳೂರಲ್ಲಿ ಜಿಬಿಎಯಿಂದ ಬೃಹತ್ ಗುಹೆ ಭಾಗ್ಯ; ಅಧಿಕಾರಿಗಳ ವಿರುದ್ಧ ಜನಾಕ್ರೋಶ

ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on:Oct 30, 2026 | 11:55 AM

Share

ಬೆಂಗಳೂರಿನ ಮಲ್ಲತಹಳ್ಳಿ, ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ರಸ್ತೆ ಕುಸಿದು ಬರೋಬ್ಬರಿ ಆರು ಅಡಿ ಆಳದ ಬೃಹತ್ ಹೊಂಡ ಸೃಷ್ಟಿಯಾಗಿದೆ. ಸೇಂಟ್ ಸೋಫಿಯಾ ಹೈಸ್ಕೂಲ್ ಬಳಿ ಕಳಪೆ ಕಾಮಗಾರಿಯಿಂದ ಉಂಟಾಗಿರುವ ಈ ಅಪಾಯಕಾರಿ ಪರಿಸ್ಥಿತಿ ವಾಹನ ಸವಾರರಿಗೆ ಆತಂಕ ತಂದಿದೆ. ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಅ.30: ನಗರದ ಮಲ್ಲತಹಳ್ಳಿ, ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ರಸ್ತೆ ಕುಸಿದು ಸೃಷ್ಟಿಯಾಗಿರುವ ಬೃಹತ್ ಆರು ಅಡಿ ಆಳದ ಹೊಂಡ, ನಾಗರಿಕರ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ಮೂಡಿಸಿದೆ. ಸೇಂಟ್ ಸೋಫಿಯಾ ಹೈಸ್ಕೂಲ್ ಮುಂಭಾಗದಲ್ಲಿ ಈ ಗುಂಡಿ ಬಿದ್ದು, ಕಳಪೆ ಕಾಮಗಾರಿಯೇ ರಸ್ತೆ ಕುಸಿತಕ್ಕೆ ಪ್ರಮುಖ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ರಸ್ತೆಗೆ ಹಾಕಿದ ಡಾಂಬರ್ ಮತ್ತು ಅದರ ಕೆಳಗಿನ ಮಣ್ಣು ಕುಸಿದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಇದು ಕೇವಲ ಗುಂಡಿಯಲ್ಲ, ಬದಲಿಗೆ ಬೃಹತ್ ಗುಹೆಯಂತೆ ಕಾಣಿಸುತ್ತಿದೆ. ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತವೆ. ಕಾರ್, ಬಸ್, ಲಾರಿಗಳಂತಹ ಭಾರೀ ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಕೆಳಗೆ ಮಣ್ಣಿಲ್ಲದೆ ಕೇವಲ ಡಾಂಬರ್ ಮಾತ್ರ ಉಳಿದಿರುವುದು ಅಪಾಯದ ಸೂಚನೆಯಾಗಿದೆ. ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ರಸ್ತೆಯನ್ನು ದುರಸ್ತಿ ಮಾಡಬೇಕೆಂದು ಸ್ಥಳೀಯರು ಹಾಗೂ ವಾಹನ ಸವಾರರು ಆಗ್ರಹಿಸಿದ್ದಾರೆ. ಜಿಬಿಎ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 30, 2026 11:23 AM

Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More