ಬೆಂಗಳೂರು: ಧಾರಾಕಾರ ಮಳೆಗೆ ಕೆರೆಯಂತಾದ ರಸ್ತೆ, ಸವಾರರು ಪರದಾಟ

Edited By:

Updated on: Sep 06, 2025 | 10:31 PM

ಬೆಂಗಳೂರಿನ ಹಲವೆಡೆ ಭಾರೀ ಮಳೆಯಿಂದ ಸಂಚಾರ ದಟ್ಟಣೆ ಉಂಟಾಗಿದೆ. ಮೆಜೆಸ್ಟಿಕ್, ಜಯನಗರ, ಕೋರಮಂಗಲ ಮುಂತಾದ ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಜನರು ಪರದಾಟ ಪಡಬೇಕಾಯಿತು. ತಗ್ಗು ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಡಿಯೋ ನೋಡಿ.

ಬೆಂಗಳೂರು, ಸೆಪ್ಟೆಂಬರ್​ 06: ನಗರದ ಹಲವೆಡೆ ಧಾರಾಕಾರ ಮಳೆ (rain) ಸುರಿದಿದೆ. ಮೆಜೆಸ್ಟಿಕ್, ಸದಾಶಿವನಗರ, ವಸಂತನಗರ, ಜಯನಗರ, ಹೆಬ್ಬಾಳ, ವಿಜಯನಗರ, ಚಂದ್ರಾಲೇಔಟ್, ಕೆ.ಆರ್.ಮಾರ್ಕೆಟ್, ಬನಶಂಕರಿ, ಯಶವಂತಪುರ, ಕೋರಮಂಗಲ, ರಾಜಾಜಿನಗರ, ಶಾಂತಿನಗರ, ಜೆ.ಪಿ.ನಗರ, ಕೆಂಗೇರಿ, ಗೊರಗುಂಟೆಪಾಳ್ಯದ ಸುತ್ತಮುತ್ತ ಜೋರು ಮಳೆ ಸುರಿದಿದೆ. ಹಲವೆಡೆ ತಗ್ಗುಪ್ರದೇಶದ ರಸ್ತೆಗಳು ಜಲಾವೃತಗೊಂಡಿದ್ದು, ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ. ಫ್ಲೈವರ್, ಸ್ಕೈವಾಕ್ ಕೆಳಗೆ ಸವಾರರು ಆಶ್ರಯ ಪಡೆದುಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 06, 2025 10:25 PM
Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More