ಬೆಂಗಳೂರಲ್ಲಿ ದರೋಡೆ ಕೇಸ್​: ಆರೋಪಿಗಳಿಗೆ ಪೊಲೀಸರ ಶಾಕ್​, ಆಂಧ್ರದಲ್ಲಿ ಬಹುಪಾಲು ಹಣ ಸೀಜ್​

Updated on: Nov 21, 2025 | 2:44 PM

ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರಾಬರಿ ಪ್ರಕರಣದಲ್ಲಿ, ಪೊಲೀಸರು 5.30 ಕೋಟಿ ರೂ. ಹಣವನ್ನು ಆಂಧ್ರದಲ್ಲಿ ವಶಪಡಿಸಿಕೊಂಡಿದ್ದಾರೆ. ಗೋವಿಂದಪುರ ಪೊಲೀಸ್ ಠಾಣೆಯ ಕಾನ್​ಸ್ಟೇಬಲ್ ಅಣ್ಣಪ್ಪ ಮತ್ತು ಮಾಜಿ ಸಿಎಂಎಸ್ ಉದ್ಯೋಗಿ ಜೇವಿಯರ್ ಈ ದರೋಡೆಯ ಪ್ರಮುಖ ಸೂತ್ರಧಾರಿಗಳಾಗಿದ್ದು, ಇಬ್ಬರನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಹಣ ಮತ್ತು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಬೆಂಗಳೂರು, ನವೆಂಬರ್​ 21: ನಗರದಲ್ಲಿ ನಡೆದಿದ್ದ 7.11 ಕೋಟಿ ರಾಬರಿ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು 5.30 ಕೋಟಿ ರೂ. ಹಣವನ್ನು ಆಂಧ್ರದಲ್ಲಿ ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಕೃತ್ಯಕ್ಕೆ ಬಳಸಲಾಗಿದ್ದ ಇನ್ನೋವಾ ಕಾರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ, ಕೇಸ್​​ನ ಪ್ರಮುಖ ಆರೋಪಿಗಳಾದ ಗೋವಿಂದಪುರ ಪೊಲೀಸ್ ಠಾಣೆಯ ಕಾನ್​ಸ್ಟೇಬಲ್ ಅಣ್ಣಪ್ಪ ಮತ್ತು ಸಿಎಂಎಸ್ ಕಂಪನಿಯ ಮಾಜಿ ಉದ್ಯೋಗಿ ಜೇವಿಯರ್​​ನನ್ನು ಈಗಾಗಲೇ ಬಂಧಿಸಿದ್ದಾರೆ. ಉಳಿದ ಹಣ ಮತ್ತು ಆರೋಪಿಗಳ ಪತ್ತೆಗೆ ಪೊಲೀಸರ ಶೋಧ ಕಾರ್ಯ ತೀವ್ರಗೊಂಡಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.