ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ರಾತ್ರಿಪೂರ್ತಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷದ ಹಿನ್ನೆಲೆ ರೌಡಿಶೀಟರ್ನ ಅಪಹರಿಸಿರೋ ಗ್ಯಾಂಗ್ ಆತನ ಬೆಳರು ಕತ್ತರಿಸಿ ವಿಕೃತಿ ಮೆರೆದಿದ್ದಲ್ಲದೆ, ಚಿತ್ರಹಿಂಸೆ ನೀಡಿರುವ ಘಟನೆ ಆನೇಕಲ್ ತಾಲ್ಲೂಕಿನ ಹುಸ್ಕೂರು ಬಳಿ ನಡೆದಿದೆ. ರೌಡಿಶೀಟರ್ ಸ್ಥಿತಿ ಸದ್ಯ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಆನೇಕಲ್, ಜನವರಿ 08: ಹಳೆ ದ್ವೇಷದ ಹಿನ್ನೆಲೆ ರೌಡಿಶೀಟರ್ ಗಂಗಾ ಮತ್ತು ಆತನ ಗ್ಯಾಂಗ್, ರೌಡಿಶೀಟರ್ ಕಾರ್ತಿಕ್ ಅಲಿಯಾಸ್ ಸಲಗನನ್ನು ಅಪಹರಿಸಿ ರಾತ್ರಿಪೂರ್ತಿ ಚಿತ್ರಹಿಂಸೆ ನೀಡಿದೆ. ಆನೇಕಲ್ ತಾಲೂಕಿನ ಹುಸ್ಕೂರು ಬಳಿ ಈ ಘಟನೆ ನಡೆದಿದ್ದು, ಕಾರ್ತಿಕ್‌ನನ್ನು ಕಿಡ್ನ್ಯಾಪ್ ಮಾಡುವುದಲ್ಲದೆ, ಆತನ ಬೆರಳನ್ನು ಕತ್ತರಿಸಿ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. ಇಡೀ ರಾತ್ರಿ ಚಿತ್ರಹಿಂಸೆ ನೀಡಿದ ನಂತರ, ಗ್ಯಾಂಗ್ ಕಾರ್ತಿಕ್‌ನನ್ನು ಹುಸ್ಕೂರು ಬಳಿಯೇ ರಸ್ತೆಗೆ ಎಸೆದು ಪರಾರಿಯಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಕಾರ್ತಿಕ್‌ನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆತನ ಸ್ಥಿತಿ ಚಿಂತಾಜನಕವಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ರೌಡಿಶೀಟರ್ ಗಂಗಾ ಮತ್ತು ಆತನ ಸಹಚರರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
