ಅಣ್ಣಮ್ಮ ಸಾಂಗ್​ಗೆ ಮಚ್ಚು ಹಿಡಿದು ರೌಡಿಶೀಟರ್ ಡ್ಯಾನ್ಸ್ ! ಇಬ್ಬರ ಬಂಧನ

Edited By:

Updated on: Mar 29, 2026 | 2:06 PM

ನಗರದಲ್ಲಿ ರೌಡಿಶೀಟರ್ ಮಚ್ಚು ಹಿಡಿದು ಡ್ಯಾನ್ಸ್ ಮಾಡಿದ ವೀಡಿಯೋ ವೈರಲ್ ಆದ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ರಂಜಿತ್ ಅಲಿಯಾಸ್ ರಂಜು ಮತ್ತು ನಂದೀಶ್ ಬಂಧಿತರು. ಕರಗದ ವೇಳೆ ಬಳಸುವ ದೇವಿಯ ಹಾಡಿಗೆ ಎಣ್ಣೆ ಪಾರ್ಟಿಯಲ್ಲಿ ಮಚ್ಚು ಹಿಡಿದು ಸ್ಟೆಪ್ಸ್ ಹಾಕಿರುವುದು ವೀಡಿಯೋದಲ್ಲಿ ಕಂಡುಬಂದಿದೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ. ರಂಜಿತ್ ವಿರುದ್ಧ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಹಲವು ಪ್ರಕರಣಗಳಿದ್ದು, ಕೊಲೆ ಪ್ರಕರಣವೂ ಸೇರಿದೆ. ಆರೋಪಿಗಳು ವೀಡಿಯೋ ಹಳೆಯದು ಎಂದು ಹೇಳಿದರೂ, ಪೊಲೀಸರು ಗಂಭೀರವಾಗಿ ಪರಿಗಣಿಸಿ ಇಬ್ಬರನ್ನೂ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಬೆಂಗಳೂರು, ಮಾರ್ಚ್​ 29: ನಗರದಲ್ಲಿ ರೌಡಿಶೀಟರ್ ಮಚ್ಚು ಹಿಡಿದು ಡ್ಯಾನ್ಸ್ ಮಾಡಿದ ವೀಡಿಯೋ ವೈರಲ್ ಆದ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ರಂಜಿತ್ ಅಲಿಯಾಸ್ ರಂಜು ಮತ್ತು ನಂದೀಶ್ ಬಂಧಿತರು. ಕರಗದ ವೇಳೆ ಬಳಸುವ ದೇವಿಯ ಹಾಡಿಗೆ ಎಣ್ಣೆ ಪಾರ್ಟಿಯಲ್ಲಿ ಮಚ್ಚು ಹಿಡಿದು ಸ್ಟೆಪ್ಸ್ ಹಾಕಿರುವುದು ವೀಡಿಯೋದಲ್ಲಿ ಕಂಡುಬಂದಿದೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ. ರಂಜಿತ್ ವಿರುದ್ಧ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಹಲವು ಪ್ರಕರಣಗಳಿದ್ದು, ಕೊಲೆ ಪ್ರಕರಣವೂ ಸೇರಿದೆ. ಆರೋಪಿಗಳು ವೀಡಿಯೋ ಹಳೆಯದು ಎಂದು ಹೇಳಿದರೂ, ಪೊಲೀಸರು ಗಂಭೀರವಾಗಿ ಪರಿಗಣಿಸಿ ಇಬ್ಬರನ್ನೂ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Published on: Mar 29, 2026 02:06 PM
Follow Us
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More