ಬೆಂಗಳೂರಿನಲ್ಲಿ 7 ಕೋಟಿ ರೂ. ದರೋಡೆ: 5.56 ಕೋಟಿ ಸಿಕ್ಕಿದ್ದೆಲ್ಲಿ? ಖದೀಮರ ಖರ್ತಾನಕ್ ಹೆಜ್ಜೆ ಗುರುತು ಬಯಲು

Updated on: Nov 23, 2025 | 2:39 PM

ಬೆಂಗಳೂರಿನಲ್ಲಿ ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ ವಾಹನ ತಡೆದು .11 ಕೋಟಿ ಹಣ ದರೋಡೆ ಪ್ರಕರಣರವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಖದೀಮರು ಹೊತ್ತೊಯ್ದಿದ್ದ 7 ಕೋಟಿ 11 ಲಕ್ಷ ರೂಪಾಯಿನಲ್ಲಿ ಬರೋಬ್ಬರಿ 5.56 ಕೋಟಿ ರೂಪಾಯಿ ವಶಪಡಿಸಿಕೊಂಡಿದ್ದಾರೆ. ಹೊಸಕೋಟೆಯ ಪಾಳುಬಿದ್ದ ಮನೆಯಲ್ಲೇ 5.56 ಕೋಟಿ ರೂ. ಪತ್ತೆಯಾಗಿದೆ. ಇನ್ನು ಈ ಪ್ರಕರಣದಲ್ಲಿ ಇದುವರೆಗೆ ಒಟ್ಟು ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಮತ್ತೋರ್ವ ಆರೋಪಿಗಾಗಿ ಶೋಧ ಕಾರ್ಯ ನಡೆದಿದೆ.

ಬೆಂಗಳೂರು, (ನವೆಂಬರ್​​ 23): ಬೆಂಗಳೂರಿನಲ್ಲಿ ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ ವಾಹನ ತಡೆದು .11 ಕೋಟಿ ಹಣ ದರೋಡೆ ಪ್ರಕರಣರವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಖದೀಮರು ಹೊತ್ತೊಯ್ದಿದ್ದ 7 ಕೋಟಿ 11 ಲಕ್ಷ ರೂಪಾಯಿನಲ್ಲಿ ಬರೋಬ್ಬರಿ 5.56 ಕೋಟಿ ರೂಪಾಯಿ ವಶಪಡಿಸಿಕೊಂಡಿದ್ದಾರೆ. ಹೊಸಕೋಟೆಯ ಪಾಳುಬಿದ್ದ ಮನೆಯಲ್ಲೇ 5.56 ಕೋಟಿ ರೂ. ಪತ್ತೆಯಾಗಿದೆ. ಇನ್ನು ಈ ಪ್ರಕರಣದಲ್ಲಿ ಇದುವರೆಗೆ ಒಟ್ಟು ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಮತ್ತೋರ್ವ ಆರೋಪಿಗಾಗಿ ಶೋಧ ಕಾರ್ಯ ನಡೆದಿದೆ. ಇನ್ನು ಪ್ರಕರಣದ ಆರೋಪಿ ರಾಕೇಶ್ ಎನ್ನುವಾತ ನಿನ್ನೆ (ನವೆಂಬರ್ 22) ರಾತ್ರಿ ಸಿದ್ದಾಪುರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಬಳಿಕ ದರೋಡೆಯ ಪಿನ್ ಟು ಪಿನ್ ಮಾಹಿತಿಯನ್ನು ಪೊಲೀಸರ ಮುಂದೆ ಬಿಚ್ಚಿಟ್ಟಿದ್ದು, ಇದುವರೆಗೂ ಒಟ್ಟು 6 ಕೋಟಿ 29 ಲಕ್ಷ ಹಣ ರಿಕವರಿ ಮಾಡಲಾಗಿದ್ದು, ಇನ್ನುಳಿದ 82 ಲಕ್ಷ ರೂಪಾಯಿನೊಂದಿಗೆ ಎಸ್ಕೇಪ್ ಆಗಿರುವ ದಿನೇಶ್ ಗಾಗಿ ಹುಡುಕಾಟ ನಡೆದಿದೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More