ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ RTO ಕಾರ್ಯಾಚರಣೆ ಮುಂದುವರಿಕೆ, 85 ವಾಹನಗಳು ಸೀಜ್

Edited By:

Updated on: Aug 06, 2026 | 1:39 PM

ಬೆಂಗಳೂರಿನಲ್ಲಿ ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಪ್ರಾದೇಶಿಕ ಸಾರಿಗೆ ಕಚೇರಿ (ಆರ್.ಟಿ.ಓ) ಅಧಿಕಾರಿಗಳ ಕಾರ್ಯಾಚರಣೆ ಎರಡನೇ ದಿನವೂ ಮುಂದುವರಿದಿದೆ. ಕೋರಮಂಗಲ ಆರ್.ಟಿ.ಓ ಅಧಿಕಾರಿಗಳು ಈಗಾಗಲೇ 85 ಬೈಕ್ ಟ್ಯಾಕ್ಸಿಗಳನ್ನು ವಶಪಡಿಸಿಕೊಂಡಿದ್ದಾರೆ. ಸಾರಿಗೆ ಇಲಾಖೆ ಈ ಕಾರ್ಯಚರಣೆಗಾಗಿ 11 ತಂಡಗಳನ್ನು ರಚಿಸಿದೆ. ಈ ದಾಳಿಯಲ್ಲಿ ರಾಪಿಡೋ, ಓಲಾ, ಊಬರ್ ಬೈಕ್ ಟ್ಯಾಕ್ಸಿಗಳನ್ನು ಸೀಜ್​​ ಮಾಡಲಾಗುತ್ತಿದೆ.

ಬೆಂಗಳೂರು, ಆಗಸ್ಟ್​​ 06: ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಸಾರಿಗೆ ಇಲಾಖೆಯ ಕಾರ್ಯಾಚರಣೆ ಎರಡನೇ ದಿನವೂ ಮುಂದುವರಿದಿದೆ. ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ಓಲಾ, ಊಬರ್ ಹಾಗೂ ರಾಪಿಡೋ ಸೇರಿದಂತೆ ಹಲವು ಅನಧಿಕೃತ ಬೈಕ್ ಟ್ಯಾಕ್ಸಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ. ಪ್ರಮುಖವಾಗಿ, ಕೋರಮಂಗಲ RTO ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ತೀವ್ರಗೊಂಡಿದೆ. ಅಧಿಕಾರಿಗಳು ಈಗಾಗಲೇ 85 ಬೈಕ್ ಟ್ಯಾಕ್ಸಿಗಳನ್ನು ವಶಪಡಿಸಿಕೊಂಡಿದ್ದಾರೆ. ಅನಧಿಕೃತ ಬೈಕ್ ಟ್ಯಾಕ್ಸಿಗಳ ನಿಯಂತ್ರಣಕ್ಕಾಗಿ ಸಾರಿಗೆ ಇಲಾಖೆಯು ಒಟ್ಟು 11 ತಂಡಗಳನ್ನು ರಚನೆ ಮಾಡಿದೆ. ನಿನ್ನೆ ಒಂದೇ ದಿನ 256 ಬೈಕ್ ಟ್ಯಾಕ್ಸಿಗಳನ್ನು ಅಧಿಕಾರಿಗಳು ಸೀಜ್​​ ಮಾಡಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us