ದೊಡ್ಡಬಳ್ಳಾಪುರ: ಘಾಟಿ ಸುಬ್ರಹ್ಮಣ್ಯ ರಥೋತ್ಸವದಲ್ಲಿ ತಪ್ಪಿದ ಅನಾಹುತ: ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ

ದೊಡ್ಡಬಳ್ಳಾಪುರ: ಘಾಟಿ ಸುಬ್ರಹ್ಮಣ್ಯ ರಥೋತ್ಸವದಲ್ಲಿ ತಪ್ಪಿದ ಅನಾಹುತ: ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ

ನವೀನ್ ಕುಮಾರ್ ಟಿ
| Updated By: ವಿವೇಕ ಬಿರಾದಾರ

Updated on: Jan 16, 2024 | 2:49 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿ ಇಂದು (ಜ.16) ಬ್ರಹ್ಮ ರಥೋತ್ಸವ ನಡೆದಿದೆ. ಬ್ರಹ್ಮ ರಥೋತ್ಸವದ ವೇಳೆ ಭಾರಿ ಅನಾಹುತವೊಂದು ತಪ್ಪಿದೆ. ರಥ ಎಳೆಯುವಾಗ ನೂಕುನುಗ್ಗಲು ಉಂಟಾಗಿ ಚಕ್ರದ ಬಳಿ ಮಹಿಳೆ ಬಿದ್ದಿದ್ದರು. ಮುಂದೇನಾಯ್ತು ವಿಡಿಯೋ ನೋಡಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿ (Ghati Subramanya) ಇಂದು (ಜ.16) ಬ್ರಹ್ಮ ರಥೋತ್ಸವ ನಡೆದಿದೆ. ಬ್ರಹ್ಮ ರಥೋತ್ಸವದ ವೇಳೆ ಭಾರಿ ಅನಾಹುತವೊಂದು ತಪ್ಪಿದೆ. ರಥ ಎಳೆಯುವಾಗ ನೂಕುನುಗ್ಗಲು ಉಂಟಾಗಿ ಚಕ್ರದ ಬಳಿ ಮಹಿಳೆ ಬಿದ್ದಿದ್ದರು. ಕೂಡಲೇ ಎಚ್ಚೆತ್ತ ಪೊಲೀಸರು ಮತ್ತು ದೇವಸ್ಥಾನದ ಸಿಬ್ಬಂದಿ ಮಹಿಳೆಯನ್ನ ಮೇಲಕ್ಕೆ ಎತ್ತಿದಿದ್ದಾರೆ. ಬಳಿಕ ಮಹಿಳೆಯನ್ನು ಪಕ್ಕಕ್ಕೆ ಸರಿಸಿದ್ದಾರೆ. ಮಹಿಳೆ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ಪುಷ್ಯ ಶುದ್ದ ಷಷ್ಟಿ ಹಿನ್ನೆಲೆಯಲ್ಲಿ ಇಂದು ಘಾಟಿ ಸುಬ್ರಮಣ್ಯದಲ್ಲಿ ಬ್ರಹ್ಮ ರಥೋತ್ಸವ ನಡೆಯಿತು. ಮದ್ಯಾಹ್ನ 12.15ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್ ಮುನಿಯಪ್ಪ ಅವರು ರಥೋತ್ಸವಕ್ಕೆ ಚಾಲನೆ ನೀಡಿದರು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಥೋತ್ಸವ ನಡೆದ ಮೇಲೆ, ಈ ರಥೋತ್ಸವ ಜರಗುತ್ತದೆ. ರಥೋತ್ಸವ ಹಿನ್ನೆಲೆಯಲ್ಲಿ ದೇವಾಲಯಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದೆ. 50 ಸಾವಿರ ಕ್ಕೂ ಹೆಚ್ಚು ಜನ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಕ್ಷೇತ್ರದಲ್ಲಿ 500 ಕ್ಕೂ ಹೆಚ್ಚು ಜನ ಪೊಲೀಸರನ್ನು ನಿಯೋಜಿಸಲಾಗಿದೆ. ಭಕ್ತರಿಗೆ ತೊಂದರೆಯಾಗದಂತೆ 18 ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.