ಮಣ್ಣಲ್ಲಿ ಮಣ್ಣಾದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

Updated on: Nov 15, 2025 | 4:04 PM

ಬೆಂಗಳೂರಿನ ಜ್ಞಾನಭಾರತಿ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಸಂಸ್ಕಾರ ನೆರವೇರಿತು. ಸಾಹಿತಿ ಡಾ.ಸಿದ್ದಲಿಂಗಯ್ಯನವರ ಸಮಾಧಿ ಪಕ್ಕದಲ್ಲೇ ತಿಮ್ಮಕ್ಕನವರ ಮೃತದೇಹಕ್ಕೆ ಅಂತಿಮ ನಮನ ಸಲ್ಲಿಸಲಾಯಿತು. ಪುತ್ರ ಉಮೇಶ್ ಅವರು ರಾಷ್ಟ್ರಧ್ವಜ ಸ್ವೀಕರಿಸಿದರು. ಅಲ್ಲದೆ, ತಾಯಿಗೆ ಸ್ಮಾರಕ ನಿರ್ಮಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು.

ಬೆಂಗಳೂರು, ನವೆಂಬರ್​ 15: ನಗರದ ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನೆರವೇರಿತು. ಆ ಮೂಲಕ ವೃಕ್ಷಮಾತೆ ಮಣ್ಣಲ್ಲಿ ಮಣ್ಣಾದರು. ಸಾಹಿತಿ ಡಾ.ಸಿದ್ದಲಿಂಗಯ್ಯನವರ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ಮಾಡಲಾಗಿದೆ. ಪೊಲೀಸರು 3 ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಿದರು. ತಿಮ್ಮಕ್ಕನವರ ಪುತ್ರ ಉಮೇಶ್​ಗೆ ಗೃಹಸಚಿವ ಡಾ.ಪರಮೇಶ್ವರ್​​ ತ್ರಿವರ್ಣ ಧ್ವಜ ಹಸ್ತಾಂತರ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.