ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರಿ ದುರಂತ!
ನಗರದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿರುವ ಖಾಸಗಿ ಕೌಶಲ್ಯ ಶಾಲೆಯಲ್ಲಿ ಇಂದು (ಮೇ 30) ಬೆಳಗ್ಗೆ ಹಠಾತ್ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಆಡಿಟೋರಿಯಂನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಇಂದು ಶಾಲೆಗೆ ರಜೆ ಇದ್ದಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ಮಕ್ಕಳಿಗೆ ತೊಂದರೆ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಜ್ಞಾನಭಾರತಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು, ಮೇ 30: ನಗರದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿರುವ ಖಾಸಗಿ ಕೌಶಲ್ಯ ಶಾಲೆಯಲ್ಲಿ ಇಂದು (ಮೇ 30) ಬೆಳಗ್ಗೆ ಹಠಾತ್ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಆಡಿಟೋರಿಯಂನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಇಂದು ಶಾಲೆಗೆ ರಜೆ ಇದ್ದಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ಮಕ್ಕಳಿಗೆ ತೊಂದರೆ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಜ್ಞಾನಭಾರತಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: May 30, 2026 11:47 AM
Follow Us

