ಪ್ರಧಾನಿ ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್ಗೆ ತಮಿಳುನಾಡು ಲಿಂಕ್? ಸ್ಫೋಟಕ ಸುಳಿವು ಪತ್ತೆ
ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಬೆಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದು, ತಮಿಳುನಾಡು ಸಂಪರ್ಕದ ಕುರಿತು ತಂಡವೊಂದು ಅಲ್ಲಿಗೆ ತೆರಳಿದೆ. ಆರ್ಟ್ ಆಫ್ ಲಿವಿಂಗ್ ಮೇಲಿನ ಹಳೆಯ ಆರೋಪಗಳ ಹಿನ್ನೆಲೆಯಲ್ಲಿ ಗಮನ ಸೆಳೆಯಲು ಅಥವಾ ಭಯ ಸೃಷ್ಟಿಸಲು ಈ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪ್ರಕರಣ ಭೇದಿಸಲು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಬೆಂಗಳೂರು, ಮೇ 11: ನಿನ್ನೆ ಪ್ರಧಾನಿ ನರೇಂದ್ರ ಮೋದಿ ಸಾಗುವ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣ ಮತ್ತಷ್ಟು ಗಂಭೀರ ಪಡೆದುಕೊಂಡಿದೆ. ನಿರ್ಜನ ಪ್ರದೇಶವೊಂದರ ಕಾಂಪೌಂಡ್ ಹಿಂಭಾಗದಲ್ಲಿ ಈ ಪೆಟ್ಟಿಗೆ ಸಿಕ್ಕಿದ್ದು, ಸ್ಥಳದಲ್ಲಿ ಸಿಸಿ ಕ್ಯಾಮೆರಾಗಳಿಲ್ಲ. ಸದ್ಯ ಬೆಂಗಳೂರು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಿಂದ ಸ್ಫೋಟಕಗಳನ್ನು ತಂದು ಇಡಲಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಪೊಲೀಸ್ ತಂಡವೊಂದು ತಮಿಳುನಾಡಿಗೆ ತೆರಳಿದೆ. ಇನ್ನು ಸಿಸಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಟವರ್ ಲೊಕೇಶನ್‌ಗಳನ್ನು ಪರಿಶೀಲಿಸಲಾಗುತ್ತಿದ್ದು, ಓರ್ವ ವ್ಯಕ್ತಿ ಬಾಕ್ಸ್ನ್ನು ಇಟ್ಟು ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೋರಮಂಗಲ ಪೊಲೀಸರು ಬಂಧಿಸಿರುವ ಲೋಹಿತ್ ಎಂಬಾತನಿಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ ಎನ್ನಲಾಗುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ

