AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ: ಬೆಂಗಳೂರಲ್ಲಿ ಭಾರಿ ಹೈಡ್ರಾಮಾ

ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ: ಬೆಂಗಳೂರಲ್ಲಿ ಭಾರಿ ಹೈಡ್ರಾಮಾ

ಕಿರಣ್​ ಹನಿಯಡ್ಕ
| Edited By: |

Updated on: Jul 22, 2026 | 12:20 PM

Share

ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವನ್ನೂ ಪ್ರಮುಖ ಅಸ್ತ್ರ ಮಾಡಿಕೊಂಡು ದೇಶವ್ಯಾಪಿ ಪ್ರತಿಭಟನೆ ನಡೆಸಲಾಗುತ್ತಿದೆ. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು, ಬಿಜೆಪಿ ಕಚೇರಿ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

ಬೆಂಗಳೂರು, ಜುಲೈ 21: ನೀಟ್​​​ ಹಗರಣ ಖಂಡಿಸಿ ಹೋರಾಟದ ವೇಳೆ ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಯತ್ನವನ್ನೂ ನಡೆಸಿದ್ದಾರೆ. ರಸ್ತೆಗೆ ಬ್ಯಾರಿಕೇಡ್ ಅಳವಡಿಸಿ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದು, ಈ ವೇಳೆ ಬಿಜೆಪಿ ವಿರುದ್ಧ ಘೋಷಣೆಗಳು ಮೊಳಗಿವೆ. ಈ ವೇಳೆ ಪ್ರತಿಭಟನಾಕಾರರನ್ನು ಸುತ್ತುವರೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More