ಬಿಜೆಪಿ ಶಾಸಕ ರಾಮಮೂರ್ತಿ ನೇತೃತ್ವದಲ್ಲಿ ಕಾರ್ಯಕರ್ತರಿಂದ ಧರ್ಮಸ್ಥಳ ಚಲೋ ಅಭಿಯಾನ
ಸಾರಾ ಮಹೇಶ್ ಅವರ ನೇತೃತ್ವದಲ್ಲಿ ಜೆಡಿಎಸ್ ನಾಯಕರು ಕೂಡ ಪವಿತ್ರ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕೆ ಕಾರಣನಾದ ಸಿಎಸ್ ಚಿನ್ನಯ್ಯನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ನಿನ್ನೆ ರಾತ್ರಿ ಮೈಸೂರುನಿಂದ ಕಾರುಗಳಲ್ಲಿ ಧರ್ಮಸ್ಥಳಕ್ಕೆ ಱಲಿ ಹೊರಟರು. ನಾವು ಶನಿವಾರ ವರದಿ ಮಾಡಿದ ಹಾಗೆ ನೆಲಮಂಗಲದ ಕಾಂಗ್ರೆಸ್ ಶಾಸಕ ಎನ್ ಶ್ರೀನಿವಾಸ್ ಮುಂದಾಳತ್ವದಲ್ಲಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಸುಮಾರು 350 ಕಾರುಗಳಲ್ಲಿ ಧರ್ಮಸ್ಥಳಕ್ಕೆ ಹೋದರು.
ಬೆಂಗಳೂರು, ಆಗಸ್ಟ್ 25: ಧರ್ಮಸ್ಥಳದಲ್ಲಿ ನಡೆದ ಎಲ್ಲ ವಿದ್ಯಮಾನಗಳನ್ನು ಮಾಧ್ಯಮಗಳಲ್ಲಿ ನೋಡಿರುವ ಕನ್ನಡಿಗರು ಪವಿತ್ರ ಸ್ಥಳಕ್ಕೆ ಮಸಿ ಬಳಿಯಲು ನಡೆದ ಪ್ರಯತ್ನದಿಂದ ಬೇಸರಗೊಂಡಿದ್ದಾರೆ. ಎಲ್ಲ ರಾಜಕೀಯ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರು ಸಹ ನೊಂದಿದ್ದಾರೆ. ಹಾಗಾಗೇ, ಧರ್ಮಸ್ಥಳದ ಜೊತೆ ತಮ್ಮ ಸಮಗ್ರತೆಯನ್ನು ಪ್ರದರ್ಶಿಸಲು ಬೇರೆ ಬೇರೆ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರು ಅಲ್ಲಿಗೆ ಜಾಥಾ ಹೊರಟಿದ್ದಾರೆ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿಕೆ ರಾಮಮೂರ್ತಿ (CK Ramamurthy) ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಇವತ್ತು ಧರ್ಮಸ್ಥಳಕ್ಕೆ ಹೊರಟರು. ಗಣೇಶನ ಗುಡಿಯಲ್ಲಿ ಪೂಜೆಯನ್ನು ನೆರವೇರಿಸಿದ ಬಳಿಕ ಕಾರ್ಯಕರ್ತರು ಜಾಥಾ ಹೊರಟಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.
ಇದನ್ನೂ ಓದಿ: ಸುಮಾರು 350 ಕಾರುಗಳಲ್ಲಿ ಕಾರ್ಯಕರ್ತರು ಮತ್ತು ಮಠಾಧೀಶರೊಂದಿಗೆ ಧರ್ಮಸ್ಥಳಕ್ಕೆ ಜಾಥಾ ಹೊರಟ ನೆಲಮಂಗಲ ಕಾಂಗ್ರೆಸ್ ಶಾಸಕ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ