AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ, ತೇಜಸ್ವಿ ಸೂರ್ಯ ಸವಾಲ್

ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ, ತೇಜಸ್ವಿ ಸೂರ್ಯ ಸವಾಲ್

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Feb 06, 2026 | 6:59 PM

Share

ಬೆಂಗಳೂರಿನ ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಬಿಎಂಆರ್‌ಸಿಎಲ್‌ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯನವರ ಸರ್ಕಾರವೇ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕರು, ಎಲ್ಲಾ ಏರಿಕೆ ಮಾಡುವುದು ಕೇಂದ್ರ ಸರ್ಕಾರದ ಎಂದು ತಿರುಗೇಟು ನೀಡುತ್ತಿದ್ದಾರೆ. ಹೀಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಇದರ ಮಧ್ಯೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಹ ರಾಜ್ಯ ಸರ್ಕಾರದ ವಿರುದ್ಧವೇ ಆರೋಪಿಸಿದ್ದಾರೆ.

ಶಿವಮೊಗ್ಗ, (ಫೆಬ್ರವರಿ 06): ಬೆಂಗಳೂರು ನಮ್ಮ ಮೆಟ್ರೊ (Bengaluru Namma Metro)  ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಬಿಎಂಆರ್‌ಸಿಎಲ್‌ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯನವರ ಸರ್ಕಾರವೇ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದೆ ಎಂದು ಬಿಜೆಪಿ(BJP) ನಾಯಕರು ಆರೋಪಿಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕರು, ಎಲ್ಲಾ ಏರಿಕೆ ಮಾಡುವುದು ಕೇಂದ್ರ ಸರ್ಕಾರದ ಎಂದು ತಿರುಗೇಟು ನೀಡುತ್ತಿದ್ದಾರೆ. ಹೀಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಇದರ ಮಧ್ಯೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಹ ರಾಜ್ಯ ಸರ್ಕಾರದ ವಿರುದ್ಧವೇ ಆರೋಪಿಸಿದ್ದಾರೆ. ಇನ್ನು ಒಂದು ವೇಳೆ ಕೇಂದ್ರ ಸರ್ಕಾರವೇ ಮೆಟ್ರೋ ಟಿಕೆಟ್ ದರ ಏರಿಸಿದ್ದೇ ಆದ್ರೆ 24 ಗಂಟೆಯೊಳಗೆ ಕಡಿಮೆ ಮಾಡಿಸುತ್ತೇನೆ ಎಂದು ತೇಜಸ್ವಿ ಸೂರ್ಯ ಭರವಸೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More