AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ

ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ

ದಿಲೀಪ್​, ಚೌಡಹಳ್ಳಿ
| Updated By: Ganapathi Sharma

Updated on:May 23, 2025 | 12:25 PM

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡುವ ಪ್ರಸ್ತಾವನೆಗೆ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರ ಬೆನ್ನಲ್ಲೇ ನಾಮಫಲಕಗಳು, ಬೋರ್ಡ್​​ಗಳನ್ನು ಬದಲಾಯಿಸುವ ಪ್ರಕ್ರಿಯೆಯೂ ಆರಂಭವಾಗಿದೆ. ರಾಮನಗರ ಎಂದಿದ್ದ ಬೋರ್ಡನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಿದ ವಿಡಿಯೋ ಇಲ್ಲಿದೆ ನೋಡಿ.

ರಾಮನಗರ, ಮೇ 23: ಶೋಲೆ ಸಿನಿಮಾನದ ಕಥಾವಸ್ತು ರಾಮಗಢ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ತೆರೆದುಕೊಂಡಿದ್ದರೂ, ಅದರ ನಿಜವಾದ ಮ್ಯಾಜಿಕ್ ನಡೆದಿದ್ದೇ ರಾಮನಗರದಲ್ಲಿ. ರಾಮನಗರದ ರಮಣೀಯ ಸೌಂದರ್ಯವನ್ನು ಶೋಲೆ ಸಿನಿಮಾದಲ್ಲಿ ಪ್ರತಿಬಿಂಬಿಸಲಾಗಿತ್ತು. ಅಂಥ ರಾಮನಗರ ಇನ್ನಿಲ್ಲವಾಗುತ್ತದೆ! ಅಂದರೆ ಹೆಸರು ಬದಲಾವಣೆಯಾಗಲಿದೆ. ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕರ್ನಾಟಕ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಇದರ ಬೆನ್ನಲ್ಲೇ, ರಾಮನಗರದಲ್ಲಿ ಬೋರ್ಡ್ ಬದಲಾಯಿಸುವ ಪ್ರಕ್ರಿಯೆ ಕೂಡ ಆರಂಭಗೊಂಡಿದೆ. ರಾಮನಗರ ಎಂದು ಇರುವಲ್ಲಿ ಬೆಂಗಳೂರು ದಕ್ಷಿಣ ಎಂದು ಹೆಸರು ಬದಲಾಯಿಸಿ ನಾಮಫಲಕಗಳನ್ನು ಹಾಕಲಾಗುತ್ತಿದೆ.

ರಾಮನಗರ ಮೊದಲು ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿತ್ತು. ನಂತರ ಹೆಚ್​ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ 2007ರ ಆಗಸ್ಟ್ 23 ರಂದು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಗಿತ್ತು. ಜೆಡಿಎಸ್ ಹಾಗೂ ಬಿಜೆಪಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಇದೀಗ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಬಲ ಆಕಾಂಕ್ಷೆಯ ಮೇರೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.

ವಿವರಗಳಿಗೆ ಓದಿ: ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಸಂಪುಟ ಒಪ್ಪಿಗೆ: ಹಠ ಸಾಧಿಸಿ ಗೆದ್ದ ಡಿಕೆ ಶಿವಕುಮಾರ್

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 23, 2025 11:16 AM