AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ

ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ

ಅರುಣ್ ಕುಮಾರ್​ ಆರ್​.
| Edited By: |

Updated on: Sep 26, 2026 | 9:12 PM

Share

ಬೆಂಗಳೂರು ದಕ್ಷಿಣ ನಗರ ಪಾಲಿಕೆಯು ಬೀದಿ ದೀಪ ನಿರ್ವಹಣೆಯಲ್ಲಿ ಲೋಪ ಎಸಗಿದ ಮೂರು ಗುತ್ತಿಗೆದಾರ ಕಂಪನಿಗಳಿಗೆ ಒಟ್ಟು 13 ಲಕ್ಷ ರೂ ದಂಡ ವಿಧಿಸಿದೆ. ಸೆಪ್ಟೆಂಬರ್ 1ರಿಂದ 23ರ ವರೆಗೆ ‘ಸಹಾಯ’ ಆ್ಯಪ್‌ನಲ್ಲಿ ಬಂದ ದೂರುಗಳ ಪರಿಶೀಲನೆ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಸಿಬ್ಬಂದಿ ಸಮರ್ಪಕವಾಗಿ ಪರಿಶೀಲನೆ ಹಾಗೂ ದುರಸ್ತಿ ಮಾಡದ ಕಾರಣ ಹಲವು ಬೀದಿ ದೀಪಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಪತ್ತೆಯಾಗಿದೆ.

ಬೆಂಗಳೂರು, ಸೆಪ್ಟೆಂಬರ್​ 26: ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆ ಮೂವರು ಗುತ್ತಿಗೆದಾರರಿಗೆ ಒಟ್ಟು 13,00,753 ದಂಡ ವಿಧಿಸಲಾಗಿದೆ. ಸಹಾಯ ಆ್ಯಪ್‌ನಲ್ಲಿ ಸೆಪ್ಟೆಂಬರ್ 1ರಿಂದ 23ರವರೆಗೆ ದಾಖಲಾಗಿದ್ದ ಸಾರ್ವಜನಿಕ ದೂರುಗಳನ್ನು ಪರಿಶೀಲಿಸಿ, ರಾತ್ರಿ ವೇಳೆ ನಡೆಸಿದ ತಪಾಸಣೆ ವೇಳೆ ಹಲವೆಡೆ ಬೀದಿದೀಪಗಳು ಬೆಳಗದಿರುವುದು ಹಾಗೂ ಗುತ್ತಿಗೆದಾರರ ಸಿಬ್ಬಂದಿ ನಿಯಮಿತ ಪರಿಶೀಲನೆ ಮತ್ತು ದುರಸ್ತಿ ಕಾರ್ಯ ಕೈಗೊಳ್ಳದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಸ್ಪೆಕ್ಟ್ರಮ್ ಟೂಲ್ ಇಂಜಿನಿಯರ್ಸ್ ಪ್ರೈವೇಟ್ ಲಿಮಿಟೆಡ್‌ಗೆ 9,56,955 ರೂ, ಎಫಿಲೂಮ್ ಪ್ರೈವೇಟ್ ಲಿಮಿಟೆಡ್‌ಗೆ 3,29,199 ರೂ ಹಾಗೂ ಟ್ರಾನ್ಸ್‌ಗ್ಲೋಬಲ್ ಪವರ್ ಲಿಮಿಟೆಡ್‌ಗೆ 14,599 ರೂ ದಂಡ ವಿಧಿಸಲಾಗಿದೆ. ಹಾಳಾಗಿರುವ ಎಲ್‌ಇಡಿ ಬೀದಿದೀಪಗಳನ್ನು ತಕ್ಷಣವೇ ದುರಸ್ತಿಪಡಿಸುವಂತೆ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ಸೂಚಿಸಿದ್ದು, ನಿರ್ಲಕ್ಷ್ಯ ಮುಂದುವರಿದರೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅರುಣ್ ಕುಮಾರ್​ ಆರ್​.
ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More