ಪ್ರಿಯಕರನ ಜೊತೆ ಸೇರಿ ತಾಯಿಯನ್ನೇ ಕೊಂದ ಮಗಳು, ಸಿಕ್ಕಿಬಿದ್ದಿದ್ದೇ ರೋಚಕ
ಬೆಂಗಳೂರಿನ (Bengaluru) ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಉತ್ತರಹಳ್ಳಿಯಲ್ಲಿ ಕಳೆದ ಶನಿವಾರ ವರದಿಯಾಗಿದ್ದ ಮಹಿಳೆಯ ಅಸಹಜ ಸಾವು ಪ್ರಕರಣಕ್ಕೀಗ ಸ್ಫೋಟಕ ತಿರುವು ದೊರೆತಿದೆ. ಮೃತ ಮಹಿಳೆ ನೇತ್ರಾವತಿಯ (34) ಅಪ್ರಾಪ್ತ ಮಗಳು, ಆಕೆಯ ಪ್ರಿಯಕರ ಹಾಗೂ ಆತನ ಸ್ನೇಹಿತರೇ ಕೊಲೆ ಮಾಡಿರುವುದು ಬಹಿರಂಗವಾಗಿದೆ.
ಬೆಂಗಳೂರು,(ಅಕ್ಟೋಬರ್ 31): ಬೆಂಗಳೂರಿನ (Bengaluru) ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಉತ್ತರಹಳ್ಳಿಯಲ್ಲಿ ಕಳೆದ ಶನಿವಾರ ವರದಿಯಾಗಿದ್ದ ಮಹಿಳೆಯ ಅಸಹಜ ಸಾವು ಪ್ರಕರಣಕ್ಕೀಗ ಸ್ಫೋಟಕ ತಿರುವು ದೊರೆತಿದೆ. ಮೃತ ಮಹಿಳೆ ನೇತ್ರಾವತಿಯ (34) ಅಪ್ರಾಪ್ತ ಮಗಳು, ಆಕೆಯ ಪ್ರಿಯಕರ ಹಾಗೂ ಆತನ ಸ್ನೇಹಿತರೇ ಕೊಲೆ ಮಾಡಿರುವುದು ಬಹಿರಂಗವಾಗಿದೆ. ನೇತ್ರಾವತಿಯ ಮಗಳು, ಆಕೆಯ ಪ್ರಿಯಕರ ಮತ್ತು ಆತನ ಮೂವರು ಸ್ನೇಹಿತರು ಸೇರಿ ಒಟ್ಟು ಐವರು ಅಪ್ರಾಪ್ತರು ಕೊಲೆಯಲ್ಲಿ ಶಾಮೀಲಾಗಿರವುದನ್ನು ಸುಬ್ರಹ್ಮಣ್ಯಪುರ ಪೊಲೀಸರು ಬಯಲಿಗೆಳೆದಿದ್ದಾರೆ. ಲವರ್ ಜೊತೆ ಸೇರಿ ತಾಯಿಯನ್ನು ಕೊಲೆ ಮಾಡಿದ್ದ ಪುತ್ರಿ ಸಿಕ್ಕಿಬಿದ್ದಿದ್ದೇ ರೋಚಕವಾಗಿದೆ. ಇನ್ನು ಈ ಬಗ್ಗೆ ನೈರುತ್ಯ ವಿಭಾಗದ ಡಿಸಿಪಿ ಅನಿತಾ ಬಿ ಹಡಣ್ಣನವರ್ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

