AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಕೊನೆಗೂ ಸತ್ಯಬಿಚ್ಚಿಟ್ಟ ಸಿಎಂ

RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಕೊನೆಗೂ ಸತ್ಯಬಿಚ್ಚಿಟ್ಟ ಸಿಎಂ

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ರಮೇಶ್ ಬಿ. ಜವಳಗೇರಾ

Updated on:Jun 11, 2025 | 4:42 PM

ಜೂನ್ 4, 2025. ಕರ್ನಾಟಕದ ಪಾಲಿಗೆ ಕರಾಳ ದಿನ. ಆರ್​​ ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಇನ್ನು ವಿಧಾನಸೌಧ ಮೆಟ್ಟಿಲುಗಳ ಮೇಲೆ ಸಹ ಆರ್ ಸಿಬಿ ಅಭಿಮಾನಿಗಳಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಚಿಕ್ಕಬಳ್ಳಾಪುರ, (ಜೂನ್ 11): ಜೂನ್ 4, 2025. ಕರ್ನಾಟಕದ ಪಾಲಿಗೆ ಕರಾಳ ದಿನ. ಆರ್​​ ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಇನ್ನು ವಿಧಾನಸೌಧ ಮೆಟ್ಟಿಲುಗಳ ಮೇಲೆ ಸಹ ಆರ್ ಸಿಬಿ ಅಭಿಮಾನಿಗಳಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೆ.ಗೋವಿಂದರಾಜು ಮೂಲಕ ರಾಜ್ಯಪಾಲರನ್ನು ನಾನು ಕರೆದಿದ್ದೇನೆ. ಎಂಎಲ್​ಸಿ ಕೆ.ಗೋವಿಂದರಾಜು ಮೂಲಕ ಕರೆ ಮಾಡಿಸಿ ಕರೆಸಿದ್ದೆ. ನಾನು ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ. ನೀವೂ ಬನ್ನಿ ಎಂದು ಕರೆದೆ. ಬೆಳಗ್ಗೆ 11.19ಕ್ಕೆ KSCA ಕಾರ್ಯದರ್ಶಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ರು ಎಂದು ಸ್ಪಷ್ಟಪಡಿಸಿದ್ದಾರೆ.

Published on: Jun 11, 2025 04:40 PM