ಬೆಂಗಳೂರು ಕಾಲ್ತುಳಿತ: ವಿರಾಟ್ ಕೊಹ್ಲಿ ಮೇಲೂ ಕೇಸ್ ಆಗುತ್ತಾ? ಪರಮೇಶ್ವರ್ ಕೊಟ್ಟರು ಮಹತ್ವದ ಮಾಹಿತಿ
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ ಸಂಬಂಧ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ನೇತೃತ್ವದ ಏಕ ಸದಸ್ಯ ಆಯೋಗದ ವರದಿಯಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಹೆಸರಿದೆಯೇ? ವಿರಾಟ್ ಕೊಹ್ಲಿ ವಿರುದ್ಧವೂ ಆರೋಪ ಹೊರಿಸಲು ಸರ್ಕಾರ ಮುಂದಾಗಿದೆಯೇ? ಈ ಎಲ್ಲ ಪ್ರಶ್ನೆಗಳಿಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದು, ಸೂಕ್ತ ಉತ್ತರ ನೀಡಿದ್ದಾರೆ. ಅವರ ಮಾತಿನ ವಿಡಿಯೋ ಇಲ್ಲಿದೆ.
ಬೆಂಗಳೂರು, ಜುಲೈ 24: ಆರ್ಸಿಬಿ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಜೈಲಿಗೆ ಕಳುಹಿಸಲು ಸರ್ಕಾರ ಹುನ್ನಾರ ಮಾಡುತ್ತಿದೆ ಎಂಬ ಆರೋಪ ಇತ್ತೀಚೆಗೆ ಕೇಳಿಬಂದಿತ್ತು. ಈ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಉತ್ತರಿಸಿದ್ದಾರೆ. ಮೊದಲಿಗೆ ಆಂಧ್ರ ಪ್ರದೇಶದಲ್ಲಿ ಕರ್ನಾಟಕದ ಬಿಜೆಪಿ ಮುಖಂಡರ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಂತರ ಕೊಹ್ಲಿ ವಿಚಾರವಾಗಿ ಉತ್ತರಿಸಿದರು. ಅವರು ಹೇಳಿದ್ದೇನೆಂಬುದರ ವಿಡಿಯೋ ಇಲ್ಲಿದೆ.
Published on: Jul 24, 2025 11:59 AM
Latest Videos

