ಬೆಂಗಳೂರು ಕಾಲ್ತುಳಿತ: ವಿರಾಟ್ ಕೊಹ್ಲಿ ಮೇಲೂ ಕೇಸ್ ಆಗುತ್ತಾ? ಪರಮೇಶ್ವರ್ ಕೊಟ್ಟರು ಮಹತ್ವದ ಮಾಹಿತಿ

Updated on: Jul 24, 2025 | 12:58 PM

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ ಸಂಬಂಧ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ನೇತೃತ್ವದ ಏಕ ಸದಸ್ಯ ಆಯೋಗದ ವರದಿಯಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಹೆಸರಿದೆಯೇ? ವಿರಾಟ್ ಕೊಹ್ಲಿ ವಿರುದ್ಧವೂ ಆರೋಪ ಹೊರಿಸಲು ಸರ್ಕಾರ ಮುಂದಾಗಿದೆಯೇ? ಈ ಎಲ್ಲ ಪ್ರಶ್ನೆಗಳಿಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದು, ಸೂಕ್ತ ಉತ್ತರ ನೀಡಿದ್ದಾರೆ. ಅವರ ಮಾತಿನ ವಿಡಿಯೋ ಇಲ್ಲಿದೆ.

ಬೆಂಗಳೂರು, ಜುಲೈ 24: ಆರ್​ಸಿಬಿ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಜೈಲಿಗೆ ಕಳುಹಿಸಲು ಸರ್ಕಾರ ಹುನ್ನಾರ ಮಾಡುತ್ತಿದೆ ಎಂಬ ಆರೋಪ ಇತ್ತೀಚೆಗೆ ಕೇಳಿಬಂದಿತ್ತು. ಈ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಉತ್ತರಿಸಿದ್ದಾರೆ. ಮೊದಲಿಗೆ ಆಂಧ್ರ ಪ್ರದೇಶದಲ್ಲಿ ಕರ್ನಾಟಕದ ಬಿಜೆಪಿ ಮುಖಂಡರ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಂತರ ಕೊಹ್ಲಿ ವಿಚಾರವಾಗಿ ಉತ್ತರಿಸಿದರು. ಅವರು ಹೇಳಿದ್ದೇನೆಂಬುದರ ವಿಡಿಯೋ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 24, 2025 11:59 AM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More