ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ

Updated By: ಗಂಗಾಧರ​ ಬ. ಸಾಬೋಜಿ

Updated on: Aug 15, 2025 | 11:47 AM

ಬೆಂಗಳೂರಿನ ವಿಲ್ಸನ್ ಗಾರ್ಡನ್ ಚಿನ್ನಯ್ಯನಪಾಳ್ಯದಲ್ಲಿ ಸಂಭವಿಸಿದ ಅನುಮಾನಾಸ್ಪದ ವಸ್ತು ಸ್ಫೋಟದಲ್ಲಿ ಎಂಟು ವರ್ಷದ ಬಾಲಕ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಘಟನೆಯಲ್ಲಿ ಹಲವು ಮನೆಗಳು ಹಾನಿಗೊಳಗಾಗಿವೆ. ಸ್ಥಳೀಯರು ಆಘಾತಕ್ಕೊಳಗಾಗಿದ್ದಾರೆ ಮತ್ತು ಘಟನೆಯ ಕಾರಣವನ್ನು ಪೊಲೀಸರು ತನಿಖೆ ನಡೆಸಿದ್ದಾರೆ. ಸ್ಥಳೀಯರು ಹೇಳುವುದು ಏನು ವಿಡಿಯೋ ನೋಡಿ.

ಬೆಂಗಳೂರು, ಆಗಸ್ಟ್​ 15: ನಗರದ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡಿದ್ದು (Object Explodes), ಓರ್ವ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಎಸ್​ಡಿಆರ್​ಎಫ್​ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸ್ಥಳೀಯರ ಪ್ರಕಾರ, ಬಲವಾದ ಶಬ್ದ ಕೇಳಿ ಬಂದಿದ್ದು, ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಸ್ಫೋಟದ ನಿಖರ ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ. ಆದರೆ, ಸಿಲಿಂಡರ್ ಸ್ಫೋಟ ಎಂದು ಅನುಮಾನಿಸಲಾಗುತ್ತಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.