AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಮಹಿಳೆಯ ಚಿನ್ನದ ಸರದೊಂದಿಗೆ ಕಳ್ಳ ಪರಾರಿ

ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಮಹಿಳೆಯ ಚಿನ್ನದ ಸರದೊಂದಿಗೆ ಕಳ್ಳ ಪರಾರಿ

ಸುಷ್ಮಾ ಚಕ್ರೆ
|

Updated on:Oct 15, 2024 | 7:24 PM

Share

ಬೆಂಗಳೂರಿನಲ್ಲಿ ಕೆಲವು ಮಹಿಳೆಯರು ವಿನಾಯಕ ದೇವಸ್ಥಾನದಲ್ಲಿ ಕುಳಿತು ಭಜನೆ ಮಾಡುತ್ತಿದ್ದರು. ಈ ವೇಳೆ ಕಿಟಕಿಯ ಬಳಿ ಕುಳಿತು ಭಜನೆ ಮಾಡುತ್ತಿದ್ದ ಮಹಿಳೆಯ ಕುತ್ತಿಗೆಗೆ ಕೈಹಾಕಿದ ಕಳ್ಳನೊಬ್ಬ ಆಕೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ. ಈ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೆಂಗಳೂರು: ಬೆಂಗಳೂರಿನ ನಂದಿನಿ ಲೇಔಟ್​ನ ಶಂಕರಪುರದ ವಿನಾಯಕ ದೇವಸ್ಥಾನದಲ್ಲಿ ಮಹಿಳೆಯೊಬ್ಬರು ದೇವರ ಭಜನೆ ಮಾಡುತ್ತಿರುವಾಗ ದೇವಾಲಯದ ಹೊರಗಿನಿಂದ ಕಿಟಕಿಯಿಂದಲೇ ಆ ಮಹಿಳೆಯ ಕುತ್ತಿಗೆಗೆ ಕೈಹಾಕಿದ ಕಳ್ಳ ಆಕೆಯ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಆಗ ಆ ಮಹಿಳೆ ಜೋರಾಗಿ ಕಿರುಚಿಕೊಂಡಿದ್ದರಿಂದ ಭಜನೆ ಮಾಡುತ್ತಿದ್ದ ಮಹಿಳೆಯರೆಲ್ಲ ಹೊರಬಂದು ಕಳ್ಳನನ್ನು ಹಿಡಿಯಲು ಪ್ರಯತ್ನಿಸಿದರೂ ಆತ ಸಿಕ್ಕಿಲ್ಲ. 30 ಗ್ರಾಂ ತೂಕದ ಚಿನ್ನದ ತಾಳಿ ಸರ ಕಿತ್ತುಕೊಂಡು ಕಳ್ಳ ಪರಾರಿಯಾಗಿದ್ದಾನೆ. ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಎಫ್​ಐಆರ್​ ದಾಖಲು ಮಾಡಿದ ನಂದಿನಿ ಲೇಔಟ್ ಪೊಲೀಸ್​​ ತನಿಖೆ ಆರಂಭಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 15, 2024 07:19 PM

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More