ಬೆಂಗಳೂರು: ಸರಗಳ್ಳತನ ಮಾಡ್ತಿದ್ದ ಮಾಜಿ ಶಾಸಕರ ಮೊಮ್ಮಗ ಸೇರಿ ಮೂವರ ಬಂಧನ

Edited By: ಕಿರಣ್ ಹನುಮಂತ್​ ಮಾದಾರ್

Updated on: Dec 07, 2023 | 7:14 PM

ಸರಗಳ್ಳತನ ಮಾಡುತ್ತಿದ್ದ ಮಾಜಿ ಶಾಸಕರ ಮೊಮ್ಮಗ ಸೇರಿ ಮೂವರನ್ನು ಬೆಂಗಳೂರಿನ(Bengaluru) ಸೋಲದೇವನಹಳ್ಳಿ ಠಾಣೆ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಮಾಜಿ ಎಂಎಲ್ಎ(MLA) ಮೊಮ್ಮಗನಾದ ಅಭಿ ಸೇರಿದಂತೆ ರಾಕೇಶ್, ಸಲ್ಮಾನ್ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಗಳ್ಳತನ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು, ಡಿ.07: ಸರಗಳ್ಳತನ ಮಾಡುತ್ತಿದ್ದ ಮಾಜಿ ಶಾಸಕರ ಮೊಮ್ಮಗ ಸೇರಿ ಮೂವರನ್ನು ಬೆಂಗಳೂರಿನ(Bengaluru) ಸೋಲದೇವನಹಳ್ಳಿ ಠಾಣೆ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಮಾಜಿ ಎಂಎಲ್ಎ(MLA) ಮೊಮ್ಮಗನಾದ ಅಭಿ ಸೇರಿದಂತೆ ರಾಕೇಶ್, ಸಲ್ಮಾನ್ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಗಳ್ಳತನ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಜೊತೆಗೆ ಸರಗಳ್ಳತನಕ್ಕೆಂದು ಈ ಖತರ್ನಾಕ್​ ಆಸಾಮಿಗಳು ಬೈಕ್​ಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಕೃತ್ಯ ಎಸಗುತ್ತಿದ್ದರು ಎಂಬುದು ತಿಳಿದು ಬಂದಿದೆ. ಆರೋಪಿಗಳ ಚಲನವಲನ ದೃಶ್ಯ ಏರಿಯಾದ ಸಿಸಿಕ್ಯಾಮಾರದಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Dec 07, 2023 07:13 PM
Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More