Freedom Park protest: ಇಂದು ಫ್ರೀಡಂಪಾರ್ಕ್‌ನಲ್ಲಿ ಜೆಡಿಎಸ್ ಪ್ರತಿಭಟನೆ; ಪಾರ್ಕ್ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ
ಫ್ರೀಡಂಪಾರ್ಕ್‌ನಲ್ಲಿ ಇಂದು ಜೆಡಿಎಸ್ (JDS) ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಫ್ರೀಡಂಪಾರ್ಕ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಬೆಳಿಗ್ಗೆ 8:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ಸಂಚಾರ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿ ಸಂಚಾರ ಪೊಲೀಸರು ಆದೇಶಿಸಿದ್ದಾರೆ.
ಬೆಂಗಳೂರು, ಆಗಸ್ಟ್ 18: ಫ್ರೀಡಂಪಾರ್ಕ್‌ನಲ್ಲಿ ಇಂದು ಜೆಡಿಎಸ್ (JDS) ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಫ್ರೀಡಂಪಾರ್ಕ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಬೆಳಿಗ್ಗೆ 8:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ಸಂಚಾರ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿ ಸಂಚಾರ ಪೊಲೀಸರು ಆದೇಶಿಸಿದ್ದಾರೆ.
ಕೆ.ಜಿ.ರಸ್ತೆ ಮೂಲಕ ಮೈಸೂರು ಬ್ಯಾಂಕ್ ವೃತ್ತದಿಂದ ಬಲತಿರುವು ಪಡೆದು ಫ್ರೀಡಂಪಾರ್ಕ್ ಕಡೆಗೆ ಬರುವ ವಾಹನಗಳು ಕಡ್ಡಾಯವಾಗಿ ಪ್ಯಾಲೇಸ್ ರಸ್ತೆಯ ಮಹಾರಾಣಿ ಅಂಡರ್‌ಪಾಸ್ ರಸ್ತೆಯನ್ನು ಬಳಸಬೇಕಾಗುತ್ತದೆ. ಫ್ರೀಡಂಪಾರ್ಕ್ ಜಂಕ್ಷನ್‌ನಿಂದ ಕನಕದಾಸ ವೃತ್ತದ ಕಡೆಗೆ ಬರುವ ಮತ್ತು ಹೋಗುವ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಇನ್ನು ಖೋಡೆ ಜಂಕ್ಷನ್ ಕಡೆಯಿಂದ ಕೆ.ಆರ್.ಸರ್ಕಲ್ ಕಡೆಗೆ ಹೋಗುವ ಸವಾರರು ಸಂಚಾರ ದಟ್ಟಣೆ ತಡೆಯಲು ಹಳೆಯ ಜೆಡಿಎಸ್ ಕಚೇರಿ ರಸ್ತೆಯನ್ನು ಪರ್ಯಾಯ ಮಾರ್ಗವಾಗಿ ಬಳಸಬಹುದು. ಗಾಂಧಿನಗರ ಕಡೆಗೆ ಹೋಗುವ ವಾಹನ ಸವಾರರ ಅನುಕೂಲಕ್ಕಾಗಿ ಸುಬ್ಬಣ್ಣ ಜಂಕ್ಷನ್‌ನಿಂದ ಎಂ.ಟಿ.ಆರ್ ಜಂಕ್ಷನ್ ವರೆಗಿನ ಏಕಮುಖ ಸಂಚಾರ ರಸ್ತೆಯನ್ನು ತಾತ್ಕಾಲಿಕವಾಗಿ ದ್ವಿಮುಖ (Two-way) ಸಂಚಾರ ರಸ್ತೆಯನ್ನಾಗಿ ಪರಿವರ್ತಿಸಲಾಗಿದೆ.
ಸುಗಮ ಸಂಚಾರಕ್ಕಾಗಿ ಖೋಡೆ ಜಂಕ್ಷನ್‌ನಿಂದ ಮಹಾರಾಣಿ ಜಂಕ್ಷನ್‌ವರೆಗೆ, ವೈ.ರಾಮಚಂದ್ರ ರಸ್ತೆ, ಕಾಳಿದಾಸ ರಸ್ತೆ, ಪ್ಯಾಲೇಸ್ ರಸ್ತೆ ಹಾಗೂ ಕೆ.ಜಿ. ರಸ್ತೆಗಳಲ್ಲಿ ಯಾವುದೇ ರೀತಿಯ ವಾಹನ ಪಾರ್ಕಿಂಗ್ ಮಾಡಲು ಅವಕಾಶವಿರುವುದಿಲ್ಲ ಎಂದು ಸಂಚಾರ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
