ವಾಹನ ಸವಾರರೇ ಗಮನಿಸಿ: ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆ ಕಡೆ ಹೋಗುವ ಲೂಪ್ ರಸ್ತೆ ಬಂದ್

Edited By:

Updated on: Aug 07, 2026 | 1:31 PM

ಬೆಂಗಳೂರಿನ ಕೆ.ಆರ್. ಮಾರ್ಕೆಟ್ ಫ್ಲೈ ಓವರ್‌ನಿಂದ ಚಾಮರಾಜಪೇಟೆಗೆ ತೆರಳುವ ಲೂಪ್ ರಸ್ತೆಯನ್ನು ವೈಟ್ ಟಾಪಿಂಗ್ ಕಾಮಗಾರಿಗಾಗಿ ಮೂರು ತಿಂಗಳ ಕಾಲ ಬಂದ್ ಮಾಡಲಾಗಿದೆ. ಈ ಅವಧಿಯಲ್ಲಿ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸಬೇಕಿದ್ದು, ಟ್ರಾಫಿಕ್ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರು, ಆಗಸ್ಟ್ 7: ಬೆಂಗಳೂರು ನಗರದ ಪ್ರಮುಖ ಸಂಚಾರ ಮಾರ್ಗವಾದ ಕೆಆರ್ ಮಾರ್ಕೆಟ್ ಫ್ಲೈ ಓವರ್ (ಬಾಲಗಂಗಾಧರನಾಥ ಸ್ವಾಮೀಜಿ ಮೇಲ್ಸೇತುವೆ) ಯ ಒಂದು ಭಾಗವನ್ನು ವೈಟ್ ಟಾಪಿಂಗ್ ಕಾಮಗಾರಿಗಾಗಿ ಮುಚ್ಚಲಾಗಿದೆ. ಚಾಮರಾಜಪೇಟೆಗೆ ಸಂಪರ್ಕ ಕಲ್ಪಿಸುವ ಲೂಪ್ ರಸ್ತೆಯು ಸುಮಾರು ಮೂರು ತಿಂಗಳ ಕಾಲ ಬಂದ್ ಆಗಿರಲಿದೆ ಎಂದು ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ. ಬಿ ಸ್ಮೈಲ್ ಸಂಸ್ಥೆಯು ಕೈಗೆತ್ತಿಕೊಂಡಿರುವ ಈ ಕಾಮಗಾರಿಯು ಟೌನ್ ಹಾಲ್‌ನಿಂದ ಬಿಜಿಎಸ್ ಫ್ಲೈ ಓವರ್ ಹತ್ತಿ ಚಾಮರಾಜಪೇಟೆ ಕಡೆಗೆ ಹೋಗುವ ವಾಹನಗಳಿಗೆ ಸಂಚಾರ ಅಡಚಣೆ ಉಂಟುಮಾಡಲಿದೆ. ವಾಹನ ಸವಾರರು ಮೈಸೂರು ರಸ್ತೆಯ ಕಡೆಗೆ ಸಾಗಿ ಅಥವಾ ಪರ್ಯಾಯ ಮಾರ್ಗಗಳನ್ನು ಬಳಸಿಕೊಂಡು ರಾಯನ್ ಸರ್ಕಲ್ ಮೂಲಕ ಚಾಮರಾಜಪೇಟೆ ತಲುಪಬೇಕಾಗುತ್ತದೆ.

ಈ ರಸ್ತೆಯಲ್ಲಿ ಸಂಚಾರ ನಿರ್ಬಂಧದಿಂದ ಚಾಮರಾಜಪೇಟೆ ಮತ್ತು ಬಸವನಗುಡಿ ಕಡೆಗೆ ತೆರಳುವ ವಾಹನಗಳಿಗೆ ತೀವ್ರ ಅನಾನುಕೂಲವಾಗಲಿದ್ದು, ಟ್ರಾಫಿಕ್ ದಟ್ಟಣೆ ಹೆಚ್ಚಾಗುವ ನಿರೀಕ್ಷೆಯಿದೆ. ಟ್ರಾಫಿಕ್ ಪೊಲೀಸರು ಸಾರ್ವಜನಿಕರಿಗೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಲಹೆ ನೀಡಿದ್ದಾರೆ. ಬಿ ಸ್ಮೈಲ್ ಮತ್ತು ಜಿಬಿಎ ಅಧಿಕಾರಿಗಳು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಿ ರಸ್ತೆ ತೆರೆಯಲು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us