ವಾಹನ ಸವಾರರೇ ಎಚ್ಚರ: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ ಟ್ರಾಫಿಕ್ ಪೊಲೀಸರು!
ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ನಗರಾದ್ಯಂತ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ತೀವ್ರಗೊಳಿಸಿದ್ದಾರೆ. ಪ್ರತಿದಿನ ಸರಾಸರಿ 500ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದು, ಕುಡಿದು ವಾಹನ ಚಲಾಯಿಸುವವರಿಗೆ 10,000 ರೂ. ದಂಡ ವಿಧಿಸಿ, ವಾಹನ ಜಪ್ತಿ ಮಾಡಲಾಗುತ್ತಿದೆ.
ಬೆಂಗಳೂರು, ಡಿಸೆಂಬರ್ 27: ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಾದ್ಯಂತ ಪೊಲೀಸರು ಡ್ರಂಕ್ ಅಂಡ್ ಡ್ರೈವ್ ತಪಾಸಣೆ ತೀವ್ರಗೊಳಿಸಿದ್ದಾರೆ. ನಗರದ ಪ್ರಮುಖ ಜಂಕ್ಷನ್‌ಗಳು ಮತ್ತು ವೃತ್ತಗಳಲ್ಲಿ, ಅದರಲ್ಲೂ ವಿಶೇಷವಾಗಿ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮೆಜೆಸ್ಟಿಕ್ ಸಂಪರ್ಕಿಸುವ ಜಂಕ್ಷನ್‌ಗಳಲ್ಲಿ ಈ ಚೆಕ್‌ಗಳನ್ನು ನಡೆಸಲಾಗುತ್ತಿದೆ. ಕಳೆದ ಒಂದು ವಾರದಿಂದಲೂ ಬೆಂಗಳೂರಿನಲ್ಲಿ ನಿರಂತರವಾಗಿ ಡ್ರಂಕ್ ಅಂಡ್ ಡ್ರೈವ್ ತಪಾಸಣೆಗಳು ನಡೆಯುತ್ತಿದ್ದು, ಪ್ರತಿದಿನ ಸರಾಸರಿ 500ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಕುಡಿದು ವಾಹನ ಚಲಾಯಿಸುತ್ತಿರುವುದು ಕಂಡುಬಂದಲ್ಲಿ ವಾಹನವನ್ನು ಜಪ್ತಿ ಮಾಡುವುದರ ಜೊತೆಗೆ 10,000 ರೂಪಾಯಿ ದಂಡ ವಿಧಿಸಲಾಗುತ್ತಿದೆ. ಹೊಸ ವರ್ಷಾಚರಣೆ ಮುಗಿಯುವವರೆಗೂ ಈ ತಪಾಸಣೆಗಳು ಪ್ರತಿದಿನವೂ ಮುಂದುವರಿಯಲಿವೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.
