ದಸರಾ ರಜೆ: ಬೆಂಗಳೂರಿನಲ್ಲಿ ತಡರಾತ್ರಿ ವರೆಗೂ ಭಾರಿ ಟ್ರಾಫಿಕ್ ಜಾಮ್

Edited By:

Updated on: Oct 17, 2026 | 6:58 AM

ದಸರಾ ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವೆಡೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರು ಊರುಗಳಿಗೆ ತೆರಳುತ್ತಿರುವುದರಿಂದ ಮೆಜೆಸ್ಟಿಕ್, ಮಲ್ಲೇಶ್ವರಂ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಇದರ ಜೊತೆಗೆ, ಖಾಸಗಿ ಬಸ್ಸುಗಳ ಟಿಕೆಟ್ ದರ ದುಪ್ಪಟ್ಟಾಗಿದ್ದು, ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು, ಅಕ್ಟೋಬರ್ 17: ದಸರಾ ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಂಗಳೂರಿನ ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಯಶವಂತಪುರ ಮತ್ತು ಪೀಣ್ಯ ಸೇರಿದಂತೆ ಹಲವು ಪ್ರದೇಶಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ದಸರಾ ರಜೆಗಾಗಿ ಜನರು ಊರುಗಳತ್ತ ತೆರಳುತ್ತಿರುವುದರಿಂದ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಸಂಭವಿಸಿದೆ. ತಡರಾತ್ರಿ ಒಂದು ಗಂಟೆಯವರೆಗೂ ಟ್ರಾಫಿಕ್ ದಟ್ಟಣೆ ಮುಂದುವರಿದಿತ್ತು.

ಸಾಮಾನ್ಯ ದಿನಗಳಲ್ಲೇ ಟ್ರಾಫಿಕ್ ಸಮಸ್ಯೆಗೆ ಹೆಸರಾದ ಬೆಂಗಳೂರಿನಲ್ಲಿ ಹಬ್ಬಗಳ ಸಂದರ್ಭದಲ್ಲಿ ಈ ಸಮಸ್ಯೆ ಇನ್ನಷ್ಟು ಉಲ್ಬಣಗೊಳ್ಳುತ್ತಿದೆ. ಟ್ರಾಫಿಕ್ ನಿಯಂತ್ರಣಕ್ಕಾಗಿ ಪೊಲೀಸರು ಹರಸಾಹಸ ಪಟ್ಟರು. ಇದೇ ವೇಳೆ, ಖಾಸಗಿ ಬಸ್ ನಿರ್ವಾಹಕರು ಟಿಕೆಟ್ ದರವನ್ನು ದುಪ್ಪಟ್ಟುಗೊಳಿಸಿರುವುದರಿಂದ ಪ್ರಯಾಣಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 500 ರೂಪಾಯಿ ಇದ್ದ ಸ್ಲೀಪರ್ ಕೋಚ್ ದರ ಈಗ 1100 ರೂಪಾಯಿ ಆಗಿರುವುದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹಬ್ಬದ ಸಮಯದಲ್ಲಿ ಹೆಚ್ಚಿನ ಸರ್ಕಾರಿ ಬಸ್​ಗಳನ್ನು ಓಡಿಸಬೇಕೆಂದು ಪ್ರಯಾಣಿಕರು ಆಗ್ರಹಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More