Mekhri Circle FlyOver: ಮೇಖ್ರಿ ಸರ್ಕಲ್ನಿಂದ ಹೆಬ್ಬಾಳ ರಸ್ತೆಯಲ್ಲಿ ಬೆಳಗ್ಗಿನಿಂದಲೇ ಭಾರೀ ಟ್ರಾಫಿಕ್ ಜಾಮ್
Bangalore Traffic: ಬೆಂಗಳೂರಿನ ಹೆಬ್ಬಾಳದಿಂದ ಮೇಖ್ರಿ ಸರ್ಕಲ್ ರಸ್ತೆ ಭಾಗವು ಬಿಡಿಎಯಿಂದ ಕೈಗೆತ್ತಿಕೊಂಡಿರುವ ಎಲಿವೇಟೆಡ್ ಕಾರಿಡಾರ್ ಕಾಮಗಾರಿಯಿಂದ 18 ತಿಂಗಳ ಕಾಲ ಸಂಪೂರ್ಣ ಬಂದ್ ಆಗುತ್ತಿದೆ. ಇದು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರು ಸೇರಿದಂತೆ ಸಾವಿರಾರು ವಾಹನ ಸವಾರರಿಗೆ ಭಾರಿ ಸಂಚಾರ ದಟ್ಟಣೆ ಸಮಸ್ಯೆ ಉಂಟುಮಾಡಲಿದೆ.
ಬೆಂಗಳೂರು, ನವೆಂಬರ್ 6: ಬೆಂಗಳೂರಿನಲ್ಲಿ ಬಿಡಿಎ ಕೈಗೆತ್ತಿಕೊಂಡಿರುವ ಬಹುನಿರೀಕ್ಷಿತ ಎಲಿವೇಟೆಡ್ ಕಾರಿಡಾರ್ ಕಾಮಗಾರಿಯಿಂದಾಗಿ ಹೆಬ್ಬಾಳದಿಂದ ಮೇಖ್ರಿ ಸರ್ಕಲ್ ವರೆಗಿನ ರಸ್ತೆ ಮುಂದಿನ 18 ತಿಂಗಳ ಕಾಲ ಬಂದ್ ಆಗಿದೆ. ಈ ಭಾಗದಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದ್ದು, ಇದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರು ಸೇರಿದಂತೆ ಸಾವಿರಾರು ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡಲಿದೆ. ನಾಲ್ಕು ಪಥಗಳ ಎಲಿವೇಟೆಡ್ ರಸ್ತೆ ನಿರ್ಮಾಣದ ಕಾರ್ಯವು ಹೆಬ್ಬಾಳದ ಯುಎಸ್‌ಎ ಸ್ಟಾಫ್ ಸ್ಕ್ವಾಟರ್ಸ್‌ನಿಂದ ಮೇಖ್ರಿ ಸರ್ಕಲ್‌ವರೆಗೆ ನಡೆಯಲಿದೆ.
ಇದರಿಂದಾಗಿ ಈ ಪ್ರದೇಶದಲ್ಲಿ, ವಿಶೇಷವಾಗಿ ಪರ್ಯಾಯ ಮಾರ್ಗಗಳಲ್ಲಿ ಬೆಳ್ಳಂಬೆಳಗ್ಗೆಯೇ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನ ಸವಾರರು, ಶಾಲಾ ಮಕ್ಕಳು ಮತ್ತು ಉದ್ಯೋಗಸ್ಥರಿಗೆ ಇದರಿಂದ ಸಮಸ್ಯೆ ಎದುರಾಗಿದೆ. ಬಸ್, ಲಾರಿ ಮತ್ತು ಇತರ ಸರಕು ಸಾಗಣೆ ವಾಹನಗಳಿಗೆ ಸರ್ವೀಸ್ ರಸ್ತೆಯಲ್ಲಿ ಮಾತ್ರ ಸಂಚರಿಸಲು ಅವಕಾಶವಿದೆ. ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

