Mekhri Circle FlyOver: ಮೇಖ್ರಿ ಸರ್ಕಲ್​ನಿಂದ ಹೆಬ್ಬಾಳ ರಸ್ತೆಯಲ್ಲಿ ಬೆಳಗ್ಗಿನಿಂದಲೇ ಭಾರೀ ಟ್ರಾಫಿಕ್ ಜಾಮ್

Edited By:

Updated on: Nov 06, 2026 | 12:06 PM

Bangalore Traffic: ಬೆಂಗಳೂರಿನ ಹೆಬ್ಬಾಳದಿಂದ ಮೇಖ್ರಿ ಸರ್ಕಲ್ ರಸ್ತೆ ಭಾಗವು ಬಿಡಿಎಯಿಂದ ಕೈಗೆತ್ತಿಕೊಂಡಿರುವ ಎಲಿವೇಟೆಡ್ ಕಾರಿಡಾರ್ ಕಾಮಗಾರಿಯಿಂದ 18 ತಿಂಗಳ ಕಾಲ ಸಂಪೂರ್ಣ ಬಂದ್ ಆಗುತ್ತಿದೆ. ಇದು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರು ಸೇರಿದಂತೆ ಸಾವಿರಾರು ವಾಹನ ಸವಾರರಿಗೆ ಭಾರಿ ಸಂಚಾರ ದಟ್ಟಣೆ ಸಮಸ್ಯೆ ಉಂಟುಮಾಡಲಿದೆ.

ಬೆಂಗಳೂರು, ನವೆಂಬರ್ 6: ಬೆಂಗಳೂರಿನಲ್ಲಿ ಬಿಡಿಎ ಕೈಗೆತ್ತಿಕೊಂಡಿರುವ ಬಹುನಿರೀಕ್ಷಿತ ಎಲಿವೇಟೆಡ್ ಕಾರಿಡಾರ್ ಕಾಮಗಾರಿಯಿಂದಾಗಿ ಹೆಬ್ಬಾಳದಿಂದ ಮೇಖ್ರಿ ಸರ್ಕಲ್ ವರೆಗಿನ ರಸ್ತೆ ಮುಂದಿನ 18 ತಿಂಗಳ ಕಾಲ ಬಂದ್ ಆಗಿದೆ. ಈ ಭಾಗದಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದ್ದು, ಇದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರು ಸೇರಿದಂತೆ ಸಾವಿರಾರು ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡಲಿದೆ. ನಾಲ್ಕು ಪಥಗಳ ಎಲಿವೇಟೆಡ್ ರಸ್ತೆ ನಿರ್ಮಾಣದ ಕಾರ್ಯವು ಹೆಬ್ಬಾಳದ ಯುಎಸ್‌ಎ ಸ್ಟಾಫ್ ಸ್ಕ್ವಾಟರ್ಸ್‌ನಿಂದ ಮೇಖ್ರಿ ಸರ್ಕಲ್‌ವರೆಗೆ ನಡೆಯಲಿದೆ.

ಇದರಿಂದಾಗಿ ಈ ಪ್ರದೇಶದಲ್ಲಿ, ವಿಶೇಷವಾಗಿ ಪರ್ಯಾಯ ಮಾರ್ಗಗಳಲ್ಲಿ ಬೆಳ್ಳಂಬೆಳಗ್ಗೆಯೇ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನ ಸವಾರರು, ಶಾಲಾ ಮಕ್ಕಳು ಮತ್ತು ಉದ್ಯೋಗಸ್ಥರಿಗೆ ಇದರಿಂದ ಸಮಸ್ಯೆ ಎದುರಾಗಿದೆ. ಬಸ್, ಲಾರಿ ಮತ್ತು ಇತರ ಸರಕು ಸಾಗಣೆ ವಾಹನಗಳಿಗೆ ಸರ್ವೀಸ್ ರಸ್ತೆಯಲ್ಲಿ ಮಾತ್ರ ಸಂಚರಿಸಲು ಅವಕಾಶವಿದೆ. ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 06, 2026 11:13 AM
Loading...
Unable to load recommendations.
Follow Us
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More