ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ? ಕಮಿಶ್ನರ್ ಏನಂದ್ರು ನೋಡಿ

Updated on: Jul 10, 2026 | 1:05 PM

ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಚಾರ ಪೊಲೀಸರು ಮತ್ತು ಜಿಬಿಎ ಜಂಟಿಯಾಗಿ ಮಹತ್ವದ ಕಾರ್ಯಾಚರಣೆಗೆ ಚಾಲನೆ ನೀಡಿದ್ದಾರೆ. ರಸ್ತೆ ಬದಿಯಲ್ಲಿ ಮತ್ತು ನೋ ಪಾರ್ಕಿಂಗ್ ಸ್ಥಳಗಳಲ್ಲಿ ಶಾಶ್ವತವಾಗಿ ನಿಲ್ಲಿಸಲಾದ ಅನಾಥ ವಾಹನಗಳನ್ನು ತೆರವುಗೊಳಿಸುವುದು ಈ ಕಾರ್ಯಾಚರಣೆಯ ಪ್ರಮುಖ ಉದ್ದೇಶವಾಗಿದೆ.

ಬೆಂಗಳೂರು, ಜುಲೈ 10: ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಚಾರ ಪೊಲೀಸರು ಮತ್ತು ಜಿಬಿಎ ಜಂಟಿಯಾಗಿ ಮಹತ್ವದ ಕಾರ್ಯಾಚರಣೆಗೆ ಚಾಲನೆ ನೀಡಿದ್ದಾರೆ. ರಸ್ತೆ ಬದಿಯಲ್ಲಿ ಮತ್ತು ನೋ ಪಾರ್ಕಿಂಗ್ ಸ್ಥಳಗಳಲ್ಲಿ ಶಾಶ್ವತವಾಗಿ ನಿಲ್ಲಿಸಲಾದ ಅನಾಥ ವಾಹನಗಳನ್ನು ತೆರವುಗೊಳಿಸುವುದು ಈ ಕಾರ್ಯಾಚರಣೆಯ ಪ್ರಮುಖ ಉದ್ದೇಶವಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಚಾರ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ , ಮೊದಲ ಹಂತದಲ್ಲಿ ಸುಮಾರು 1580 ಇಂತಹ ವಾಹನಗಳನ್ನು ಗುರುತಿಸಲಾಗಿದ್ದು, ಅವುಗಳಿಗೆ ನೋಟಿಸ್ ಅಂಟಿಸಿ ಏಳು ದಿನಗಳ ಕಾಲಾವಕಾಶ ನೀಡಲಾಗುತ್ತಿದೆ. ಈ ಅವಧಿಯೊಳಗೆ ವಾಹನ ಮಾಲೀಕರು 500 ರೂ. ಪಾರ್ಕಿಂಗ್ ದಂಡ ಪಾವತಿಸಿ ತಮ್ಮ ವಾಹನಗಳನ್ನು ತೆಗೆದುಕೊಂಡು ಹೋಗಬಹುದು. ಒಂದು ವೇಳೆ, ಮಾಲೀಕರು ನೋಟಿಸ್ ಅವಧಿಯಲ್ಲಿ ವಾಹನಗಳನ್ನು ತೆರವುಗೊಳಿಸದಿದ್ದರೆ, ಪೊಲೀಸರು ಅವುಗಳನ್ನು ಟೋ ಮಾಡಿ, ನಂತರ 15 ದಿನಗಳ ಕಾಲ ಸಾರ್ವಜನಿಕ ಪ್ರಕಟಣೆ ನೀಡುತ್ತಾರೆ. ಈ ಅವಧಿಯಲ್ಲೂ ಮಾಲೀಕರು ಸಿಗದಿದ್ದರೆ, ಜಿಬಿಎ ನಿಯಮಗಳ ಪ್ರಕಾರ ವಾಹನಗಳನ್ನು ಹರಾಜು ಮಾಡಲಾಗುವುದು ಎಂದಿದ್ದಾರೆ. ಸಾರ್ವಜನಿಕರು ನೋ ಪಾರ್ಕಿಂಗ್ ಸ್ಥಳಗಳಲ್ಲಿ ವಾಹನ ನಿಲ್ಲಿಸುವುದನ್ನು ತಪ್ಪಿಸಿ, ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us