ಬೆಂಗಳೂರಿನಲ್ಲಿ ಶಾಲಾ ಬಸ್ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಬೆಂಗಳೂರು ಸಂಚಾರಿ ಪೊಲೀಸರು ಇಂದು ಬೆಳಗ್ಗೆ ಶಾಲಾ ವಾಹನ ಚಾಲಕರ ಸುರಕ್ಷತೆ ದೃಷ್ಟಿಯಿಂದ ವಿಶೇಷ ಕಾರ್ಯಾಚರಣೆ ನಡೆಸಿದರು. ನಗರಾದ್ಯಂತ 5110 ಶಾಲಾ ಬಸ್ ಚಾಲಕರನ್ನು ತಪಾಸಣೆ ಮಾಡಿದ್ದು, ಈ ಪೈಕಿ 26 ಚಾಲಕರು ಮದ್ಯಪಾನ ಮಾಡಿರುವುದು ಪತ್ತೆಯಾಗಿದೆ. ಇವರ ಡಿಎಲ್ ರದ್ದುಪಡಿಸಲು ಆರ್.ಟಿ.ಓ ಗೆ ವರದಿ ಸಲ್ಲಿಕೆಯಾಗಿದ್ದು, ಭಾರತೀಯ ಮೋಟಾರ್ ವಾಹನ ಕಾಯ್ದೆಯಡಿ ಕೇಸ್ ದಾಖಲಾಗಿದೆ.
ಬೆಂಗಳೂರು, ಜನವರಿ 23: ನಗರದ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ಮಾಡಿದ್ದು, ಒಟ್ಟು 5110 ಶಾಲಾ ಬಸ್ ಚಾಲಕರ ತಪಾಸಣೆ ಮಾಡಿದ್ದಾರೆ. ಈ ವೇಳೆ 26 ಶಾಲಾ ಬಸ್ ಚಾಲಕರು ಮದ್ಯಸೇವಿಸಿರೋದು ಪತ್ತೆ ಆಗಿದೆ. ಮದ್ಯಸೇವಿಸಿ ವಾಹನ ಚಲಾಯಿಸುತ್ತಿದ್ದ 26 ಚಾಲಕರ ಡಿಎಲ್ ರದ್ದುಗೊಳಿಸಲು ಆರ್ಟಿಒಗೆ ಪೊಲೀಸರು ವರದಿ ಸಲ್ಲಿಸಿದ್ದಾರೆ. ಭಾರತೀಯ ಮೋಟಾರ್ ವಾಹನ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jan 23, 2026 02:49 PM
