ಬೆಂಗಳೂರು ಸಂಚಾರ ಪೊಲೀಸರಿಂದ ವಿನೂತನ ಅಭಿಯಾನ: ಒಂದು ದಿನ ಸಂಚಾರ ಪೊಲೀಸ್ ಆಗುವ ಅವಕಾಶ
ಬೆಂಗಳೂರು ಸಂಚಾರಿ ಪೊಲೀಸರು 'ಒಂದು ದಿನ ಪೊಲೀಸ್' ಎಂಬ ವಿನೂತನ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. 18 ವರ್ಷ ಮೇಲ್ಪಟ್ಟವರು ಸಂಚಾರಿ ಪೊಲೀಸರಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಅವರ ಕಷ್ಟಗಳನ್ನು ಅರ್ಥಮಾಡಿಕೊಳ್ಳಬಹುದು. ಬಿಸಿಲು, ಹೊಗೆ ನಡುವೆ ಸುಗಮ ಸಂಚಾರಕ್ಕೆ ಶ್ರಮಿಸುವ ಪೊಲೀಸರ ಸೇವೆ ಹಾಗೂ ನಗರ ಸಂಚಾರ ನಿರ್ವಹಣೆಯಲ್ಲಿ ತಮ್ಮ ಕೊಡುಗೆ ನೀಡಲು ಇದು ಉತ್ತಮ ಅವಕಾಶ. ವಿಡಿಯೋ ನೋಡಿ ನೋಂದಾಯಿಸಿ.
ಬೆಂಗಳೂರು, ನವೆಂಬರ್ 12: ಹಗಲು-ರಾತ್ರಿ ಎನ್ನದೆ ಸಂಚಾರಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಾರೆ. ಉರಿ ಬಿಸಿಲು, ವಾಹನಗಳ ಹೊಗೆ ಮಧ್ಯೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಾರೆ. ಗಂಟೆಗಟ್ಟಲೇ ನಿಂತುಕೊಂಡು ಕೆಲಸ ಮಾಡುವ ಅವರ ಕಷ್ಟ ಅವರಿಗೆ ಮಾತ್ರ ಗೊತ್ತು. ಹೀಗಾಗಿ ಜನಸಾಮಾನ್ಯರಿಗೂ ಸಂಚಾರಿ ಪೊಲೀಸರ ಕಷ್ಟವೇನು ಎಂದು ತಿಳಿಸುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರ ಪೊಲೀಸ್ ನೂತನ ಉಪಕ್ರಮಕ್ಕೆ ಕೈಹಾಕಿದ್ದಾರೆ. 18 ವರ್ಷ ಮೇಲ್ಪಟ್ಟ ಯಾರು ಬೇಕಾದರೂ ‘ಒಂದು ದಿನ’ದ ಮಟ್ಟಿಗೆ ಸಂಚಾರಿ ಪೊಲೀಸರಾಗಿ ಕರ್ತವ್ಯ ನಿರ್ವಹಿಸುವ ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ಹೇಗೆ ನೋಂದಾಯಿಸಿಕೊಳ್ಳಬೇಕು ಎಂಬ ಮಾಹಿತಿ ಇಲ್ಲಿದೆ ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 12, 2025 03:31 PM
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

