AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ: ನಿಯಮ ಉಲ್ಲಂಘಿಸಿದರೆ ಬೀಳುತ್ತೆ ಭಾರಿ ದಂಡ

ಬೆಂಗಳೂರಿನಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ: ನಿಯಮ ಉಲ್ಲಂಘಿಸಿದರೆ ಬೀಳುತ್ತೆ ಭಾರಿ ದಂಡ

ಮಂಗಳ ರಾಜಗೋಪಾಲ್​
| Edited By: |

Updated on: Sep 04, 2026 | 6:11 PM

Share

ಬೆಂಗಳೂರಿನಲ್ಲಿ ಸಂಚಾರ ಪೊಲೀಸರು ಅಕ್ರಮ ಪಾರ್ಕಿಂಗ್ ವಿರುದ್ಧ ಟೋಯಿಂಗ್ ಕಾರ್ಯಾಚರಣೆ ಪುನರಾರಂಭಿಸಿದ್ದಾರೆ. ಶಾಂತಿನಗರ ಸುತ್ತಮುತ್ತ ನೋ-ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ವಾಹನಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ದ್ವಿಚಕ್ರ ವಾಹನಕ್ಕೆ 1,150 ಮತ್ತು ನಾಲ್ಕು ಚಕ್ರದ ವಾಹನಕ್ಕೆ 1,500 ದಂಡ ವಿಧಿಸಲಾಗುತ್ತಿದೆ. ನಾಗರಿಕರ ದೂರಿನ ಮೇರೆಗೆ ಪೊಲೀಸರು ಈ ಕಠಿಣ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು, ಸೆಪ್ಟೆಂಬರ್​​ 04: ನಗರದಲ್ಲಿ ಸಂಚಾರ ಪೊಲೀಸರು ಅಕ್ರಮ ಪಾರ್ಕಿಂಗ್ ವಿರುದ್ಧದ ಟೋಯಿಂಗ್ ಕಾರ್ಯಾಚರಣೆಯನ್ನು ಮತ್ತೆ ಆರಂಭಿಸಿದ್ದಾರೆ. ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುವವರಿಗೆ ಕಠಿಣ ಸಂದೇಶ ರವಾನಿಸಲಾಗಿದ್ದು, ನಿಯಮ ಉಲ್ಲಂಘಿಸಿದರೆ ಭಾರಿ ದಂಡ ತೆರಬೇಕಾಗುತ್ತದೆ. ಕಳೆದ ಒಂದು ವಾರದಿಂದ ಬೆಂಗಳೂರಿನ ಹಲವೆಡೆ, ಅದರಲ್ಲೂ ವಿಶೇಷವಾಗಿ ಶಾಂತಿನಗರ ಸುತ್ತಮುತ್ತ ಈ ಕಾರ್ಯಾಚರಣೆ ತೀವ್ರಗೊಂಡಿದೆ. ಶಾಂತಿನಗರದ ಸೇಂಟ್ ಜೋಸೆಫ್ ಕಾಲೇಜು ಮತ್ತು ದಿವ್ಯಶ್ರೀ ಚೇಂಬರ್ಸ್ ಬಳಿ ನೋ ಪಾರ್ಕಿಂಗ್ ಫಲಕಗಳನ್ನು ಅಳವಡಿಸಲಾಗಿದ್ದು, ಅಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಟೋ ಮಾಡಲಾಗುತ್ತಿದೆ. ದ್ವಿಚಕ್ರ ವಾಹನಗಳಿಗೆ 1,150 ಮತ್ತು ನಾಲ್ಕು ಚಕ್ರದ ವಾಹನಗಳಿಗೆ 1,500 ದಂಡ ವಿಧಿಸಲಾಗುತ್ತಿದೆ. ಅಶೋಕ್ ನಗರ ಸಂಚಾರಿ ಪೊಲೀಸ್ ಠಾಣೆಗೆ ಅಕ್ರಮ ಪಾರ್ಕಿಂಗ್ ಕುರಿತು ವ್ಯಾಪಕ ದೂರುಗಳು ಬಂದಿದ್ದವು. ಈ ದೂರುಗಳ ಅನ್ವಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us