ರಾಹುಲ್ ಗಾಂಧಿ ಪ್ರತಿಭಟನೆ, ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಬಂದ್
ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗಂಭೀರವಾದ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಚುನಾವಣಾ ಅಕ್ರಮವನ್ನು ಖಂಡಿಸಿ ಇಂದು ಬೆಳಗ್ಗೆ 11:30 ರಿಂದ ನಗರದ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಲ ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ.
ಬೆಂಗಳೂರು, (ಆಗಸ್ಟ್ 08): ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗಂಭೀರವಾದ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಚುನಾವಣಾ ಅಕ್ರಮವನ್ನು ಖಂಡಿಸಿ ಇಂದು ಬೆಳಗ್ಗೆ 11:30 ರಿಂದ ನಗರದ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ಮಾಡಲಿದ್ದಾರೆ. ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ಏರ್ಪಡುವ ಸಾಧ್ಯತೆ ಇದೆ. ಸ್ವಾತಂತ್ರ್ಯ ಉದ್ಯಾನ, ವಿಧಾನಸೌಧದ ಸುತ್ತಮುತ್ತಲ ರಸ್ತೆಗಳು, ಚಾಲುಕ್ಯ ವೃತ್ತ, ಅರಮನೆ ರಸ್ತೆ, ನೃಪತುಂಗ ರಸ್ತೆ, ಮೈಸೂರು ಬ್ಯಾಂಕ್ ವೃತ್ತ ಹಾಗೂ ಮೆಜೆಸ್ಟಿಕ್ ಆಸುಪಾಸಿನಲ್ಲಿ ವಾಹನ ಚಾಲಕರು ಹಾಗೂ ದ್ವಿಚಕ್ರ ವಾಹನಗಳ ಸವಾರರಿಗೆ ಶುಕ್ರವಾರ ದಿನವಿಡೀ ದಟ್ಟಣೆಯ ಬಿಸಿ ತಟ್ಟುವ ಸಾಧ್ಯತೆ ಇದೆ.
Published on: Aug 08, 2025 10:46 AM
