ಜೆಪಿ ನಗರದಲ್ಲಿ ಕಾರಿನ ಮೇಲೆ ಬಿದ್ದ ಬೃಹತ್ ಮರ; 12 ಗಂಟೆ ಕಳೆದರೂ ಸ್ಥಳಕ್ಕೆ ಬಾರದ ಅಧಿಕಾರಿಗಳು

Edited By:

Updated on: Apr 30, 2026 | 2:00 PM

ಬೆಂಗಳೂರಿನ ಜೆಪಿ ನಗರ 24ನೇ ಮುಖ್ಯ ರಸ್ತೆಯಲ್ಲಿ ಭಾರೀ ಮಳೆಗೆ ಕಾರಿನ ಮೇಲೆ ಮರ ಬಿದ್ದಿದೆ. ಕಾರು ಸಂಪೂರ್ಣ ಜಖಂ ಆಗಿದ್ದು, ರಸ್ತೆಯ ಒಂದು ಭಾಗ ಬಂದ್ ಆಗಿದೆ. ಆದರೆ, ಸುಮಾರು 12 ಗಂಟೆಗಳು ಕಳೆದರೂ ಜಿಬಿ ಅಧಿಕಾರಿಗಳು ಸ್ಥಳಕ್ಕೆ ಬಂದು ಮರ ತೆರವುಗೊಳಿಸಲು ಅಥವಾ ಕಾರನ್ನು ತೆಗೆದುಹಾಕಲು ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಏ.30: ಸಿಲಿಕಾನ್​ ಸಿಟಿಯ ಜೆಪಿ ನಗರ 24ನೇ ಮುಖ್ಯ ರಸ್ತೆಯಲ್ಲಿ ನಿಂತಿದ್ದ ಕಾರಿನ ಮೇಲೆ ಭಾರೀ ಮಳೆಗೆ ಬೃಹತ್ ಮರವೊಂದು ಬಿದ್ದಿದೆ. ಇದರಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದರೂ, ಸುಮಾರು 12 ಗಂಟೆಗಳಾದರೂ ಜಿಬಿ ಅಧಿಕಾರಿಗಳು ಸ್ಥಳಕ್ಕೆ ಬಂದು ತೆರವು ಕಾರ್ಯಾಚರಣೆ ನಡೆಸಿಲ್ಲ. ಮರ ಬಿದ್ದ ಪರಿಣಾಮವಾಗಿ ರಸ್ತೆಯ ಒಂದು ಬದಿಯ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ವಾಹನಗಳು ಒಂದೇ ರಸ್ತೆಯಲ್ಲಿ ಎರಡೂ ಕಡೆ ಚಲಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮರ ಬಿದ್ದ ರಭಸಕ್ಕೆ ಕಾರಿನ ಮುಂಭಾಗದ ಗಾಜು ಒಡೆದುಹೋಗಿದ್ದು, ಮರದ ಕೊಂಬೆಗಳು ಸ್ಟೇರಿಂಗ್‌ಗೆ ತಗುಲಿ ಅದು ಮುರಿದುಹೋಗಿದೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಮರದ ಕೊಂಬೆಗಳು ತಗಲಿ ತೊಂದರೆಯಾಗುತ್ತಿದೆ. ಒಂದು BMTC ಬಸ್‌ನ ಸೈಡ್ ಮಿರರ್ ಕೂಡ ಮುರಿದು ಹೋಗಿದೆ. ಇಷ್ಟೆಲ್ಲಾ ಸಮಸ್ಯೆಗಳಾಗುತ್ತಿದ್ದರೂ, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿನ

Published on: Apr 30, 2026 01:58 PM
Follow Us