ಬೆಂಗಳೂರು ಸುರಂಗ ರಸ್ತೆ ಯೋಜನೆಗೆ ಬಿಜೆಪಿ ವಿರೋಧ: ಆರ್. ಅಶೋಕ್ ನೇತೃತ್ವದಲ್ಲಿ ಜನ ಜಾಗೃತಿ
ಬೆಂಗಳೂರಿನ ಟನಲ್ ರಸ್ತೆ ಯೋಜನೆ ವಿರುದ್ಧ ಲಾಲ್‌ಬಾಗ್‌ನಲ್ಲಿ ಬಿಜೆಪಿ ನಾಯಕರು ಮತ್ತು ನಾಗರಿಕರು ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ತೇಜಸ್ವಿ ಸೂರ್ಯ ಯೋಜನೆಗೆ ಅನುಮತಿಗಳಿಲ್ಲದಿರುವುದು ಹಾಗೂ ಹಣ ಲೂಟಿಯ ಉದ್ದೇಶದ ಬಗ್ಗೆ ಮಾತನಾಡಿದರು. ಪರಿಸರ ಹೋರಾಟಗಾರರು ಸಹಿ ಸಂಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಯೋಜನೆ ಬೆಂಗಳೂರಿನ ಪರಿಸರಕ್ಕೆ ಮಾರಕ ಎಂದು ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಬೆಂಗಳೂರು,ನವೆಂಬರ್ 02: ಟನಲ್ ಯೋಜನೆ ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಜನಜಾಗೃತಿ ಅಭಿಯಾನ ನಡೆಯಿತು. ವಿಪಕ್ಷ ನಾಯಕ ಆರ್. ಅಶೋಕ್ ಮತ್ತು ಸಂಸದ ತೇಜಸ್ವಿ ಸೂರ್ಯ ಈ ವಿಚಾರವಾಗಿ ಸಾರ್ವಜನಿಕರ ಜೊತೆ ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಆರ್. ಅಶೋಕ್, ಈ ಯೋಜನೆಗೆ 120 ಡಿಪಾರ್ಟ್ಮೆಂಟ್ ಇಂದ ಅನುಮತಿ ಬೇಕು. ಆದರೆ ಒಬ್ಬರ ಅನುಮತಿಯನ್ನೂ ತೆಗೆದುಕೊಂಡಿಲ್ಲ. ಬಿಹಾರ, ತಮಿಳುನಾಡು ಎಲೆಕ್ಷನ್‌ಗಾಗಿ ಮತ್ತು ಹಣ ಲೂಟಿ ಮಾಡುವ ಉದ್ದೇಶದಿಂದ ಈ ಯೋಜನೆಗೆ ಕೈ ಹಾಕಲಾಗಿದೆ. ಬೆಂಗಳೂರಿನಲ್ಲಿರುವ ಎಲ್ಲಾ ಪಾರ್ಕ್, ಲೇಕ್ಗಳನ್ನು ಹುಡುಕುತ್ತಿದ್ದಾರೆ. ಇದು ಮನೆಹಾಳು ಕೆಲಸ ಅಲ್ವಾ? ಕೆಂಪೇಗೌಡರ ಆಶಯಕ್ಕೆ ಕೊಳ್ಳಿ ಇಡ್ತಿದ್ದಾರೆ. ಇದರ ವಿರುದ್ಧ ಜನಾಂದೋಲನ ಆಗ್ಬೇಕು. ಲಾಲ್ ಬಾಗ್ ಬೆಂಗಳೂರಿನ ಶ್ವಾಸಕೋಶ ಇದ್ದಹಾಗೆ. ಮೊದಲು ಬೆಂಗಳೂರಿನಲ್ಲಿರುವ ಗುಂಡಿ ಮುಚ್ಚಿ, ನಂತರ ಚಂದ್ರಲೋಕಕ್ಕೆ ಟನಲ್ ಮಾಡಿ ಎಂದು ವ್ಯಂಗ್ಯ ಮಾಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
