ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್: ತಪ್ಪಿದ ಭಾರೀ ಅನಾಹುತ

Edited By:

Updated on: Mar 11, 2026 | 8:31 AM

ಬೆಂಗಳೂರಿನ ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಬೃಹತ್ ತಗಡಿನ ಶೀಟ್ ಕುಸಿದು ದೊಡ್ಡ ಅನಾಹುತ ತಪ್ಪಿದೆ. ಬಸ್ಸ್‌ಗೆ ತಗುಲಿ ಕಳಚಿಬಿದ್ದ ಈ ಶೀಟ್, ತುಕ್ಕು ಹಿಡಿದ ಕ್ಲಿಪ್‌ಗಳಿಂದಾಗಿ ಬೀಳಲು ಸಿದ್ಧವಾಗಿತ್ತು. ಅದೃಷ್ಟವಶಾತ್ ಪ್ರಾಣಾಪಾಯ ತಪ್ಪಿದೆ. ಸಾರ್ವಜನಿಕ ಸುರಕ್ಷತೆಗಾಗಿ ಉಳಿದ ಅಪಾಯಕಾರಿ ಶೀಟ್‌ಗಳನ್ನು ತೆರವುಗೊಳಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ, ರೈಲ್ವೆ ಇಲಾಖೆಗೆ ಮಾಹಿತಿ ರವಾನಿಸಿದ್ದಾರೆ.

ಬೆಂಗಳೂರು, ಮಾ.11: ರಾಜಧಾನಿಯ ಹೃದಯಭಾಗದ ಶೇಷಾದ್ರಿಪುರಂನಿಂದ ಆನಂದರಾವ್ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಅಂಡರ್ ಪಾಸ್‌ನಲ್ಲಿ ಇಂದು ಬೆಳಿಗ್ಗೆ ದೊಡ್ಡ ಮಟ್ಟದ ಅಪಾಯವೊಂದು ತಪ್ಪಿದೆ. ರೈಲ್ವೆ ಬ್ರಿಡ್ಜ್ ಕೆಳಭಾಗಕ್ಕೆ ಅಳವಡಿಸಲಾಗಿದ್ದ ಬೃಹತ್ ತಗಡಿನ ಶೀಟ್ ಸಂಚರಿಸುತ್ತಿದ್ದ ಬಸ್‌ಗೆ ತಗುಲಿ ನಡುರಸ್ತೆಯಲ್ಲೇ ಕಳಚಿಬಿದ್ದಿದೆ. ಅಂಡರ್ ಪಾಸ್‌ನ ಮೇಲ್ಭಾಗದ ಶೀಟ್‌ಗಳನ್ನು ಹಿಡಿದಿಟ್ಟಿದ್ದ ಕಬ್ಬಿಣದ ಕ್ಲಿಪ್‌ಗಳು ತುಕ್ಕು ಹಿಡಿದು ಕಟ್ ಆಗಿದ್ದವು. ಈ ವೇಳೆ ಬಸ್ಸು ಹಾದುಹೋಗುವಾಗ ಶೀಟ್‌ಗೆ ತಗುಲಿದ ಪರಿಣಾಮ, ಭಾರೀ ಗಾತ್ರದ ತಗಡು ರಸ್ತೆಗೆ ಬಿದ್ದಿದೆ. ಸದಾ ವಾಹನ ದಟ್ಟಣೆಯಿಂದ ಕೂಡಿರುವ ಈ ರಸ್ತೆಯಲ್ಲಿ ಶೀಟ್ ಬೀಳುವಾಗ ಯಾವುದೇ ದ್ವಿಚಕ್ರ ವಾಹನ ಅಥವಾ ಪಾದಚಾರಿಗಳು ಅಡಿ ಬಾರದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ.ಸದ್ಯ ಬಿದ್ದಿರುವ ಶೀಟ್ ಮಾತ್ರವಲ್ಲದೆ, ಪಕ್ಕದಲ್ಲಿರುವ ಇತರ ಹಲವು ತಗಡಿನ ಶೀಟ್‌ಗಳ ಕ್ಲಿಪ್‌ಗಳು ಕೂಡ ತುಕ್ಕು ಹಿಡಿದು ತುಂಡಾಗಿವೆ. ಅವುಗಳು ಕೂಡ ಯಾವುದೇ ಕ್ಷಣದಲ್ಲಿ ಕೆಳಗೆ ಬೀಳುವ ಸಾಧ್ಯತೆ ಇದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಶೇಷಾದ್ರಿಪುರಂ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಸ್ತೆಯಲ್ಲಿದ್ದ ಶೀಟ್ ತೆರವುಗೊಳಿಸಿ ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಅಲ್ಲದೆ, ಉಳಿದ ಅಪಾಯಕಾರಿ ಶೀಟ್‌ಗಳ ಬಗ್ಗೆ ರೈಲ್ವೆ ಇಲಾಖೆಗೆ ಮಾಹಿತಿ ರವಾನಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More