ಬೆಂಗಳೂರಿನ ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು, ಇಲ್ಲಾಂದ್ರೆ ಡಬ್ಬಲ್ ಆಸ್ತಿ ತೆರಿಗೆ: ಸಿಎಂ ಖಡಕ್ ಸೂಚನೆ

Edited By:

Updated on: Aug 01, 2026 | 1:58 PM

ಬೆಂಗಳೂರಿನಲ್ಲಿ ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದ್ದಾರೆ. ಖಾಲಿ ನಿವೇಶನಗಳಲ್ಲಿ ಕಸ ಸುರಿಯುವುದನ್ನು ತಡೆಯಲು ಮಹತ್ವದ ಆದೇಶ ಹೊರಡಿಸಿದ್ದಾರೆ. ಐದು ವರ್ಷದೊಳಗೆ ನಿವೇಶನಗಳಲ್ಲಿ ಕಟ್ಟಡ ನಿರ್ಮಿಸದಿದ್ದರೆ ದುಪ್ಪಟ್ಟು ಆಸ್ತಿ ತೆರಿಗೆ ವಿಧಿಸಲಾಗುವುದು ಅಥವಾ ನಿವೇಶನವನ್ನು ವಾಪಸ್ ಪಡೆಯಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇದು ತ್ಯಾಜ್ಯ ಮುಕ್ತ ಬೆಂಗಳೂರು ನಿರ್ಮಾಣಕ್ಕೆ ಪೂರಕವಾಗಿದೆ.

ಬೆಂಗಳೂರು, ಆಗಸ್ಟ್ 1: ಬೆಂಗಳೂರಿನಲ್ಲಿ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹತ್ವದ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ನಗರದ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡುವ ನಿಟ್ಟಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ, ಬೆಂಗಳೂರಿನಲ್ಲಿರುವ ಖಾಲಿ ನಿವೇಶನಗಳಿಗೆ ಸಂಬಂಧಿಸಿದಂತೆ ಕಠಿಣ ನಿಯಮಗಳನ್ನು ಘೋಷಿಸಲಾಗಿದೆ.

ಖಾಸಗಿ ಅಥವಾ ಸರ್ಕಾರಿ ಸ್ವಾಮ್ಯದ ಯಾವುದೇ ಖಾಲಿ ನಿವೇಶನಗಳಲ್ಲಿ ಮುಂದಿನ ಐದು ವರ್ಷದೊಳಗೆ ಕಟ್ಟಡ ನಿರ್ಮಿಸುವುದು ಕಡ್ಡಾಯ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಐದು ವರ್ಷದೊಳಗೆ ಕಟ್ಟಡ ನಿರ್ಮಿಸದಿದ್ದರೆ, ಆ ನಿವೇಶನದ ಆಸ್ತಿ ತೆರಿಗೆಯನ್ನು ದುಪ್ಪಟ್ಟು ಪಾವತಿಸಬೇಕಾಗುತ್ತದೆ. ಖಾಲಿ ನಿವೇಶನಗಳು ಕಸ ಸುರಿಯುವ ತಾಣಗಳಾಗಿ ಮಾರ್ಪಡುತ್ತಿದ್ದು, ಇದರಿಂದ ಸುತ್ತಮುತ್ತಲಿನ ಪರಿಸರ ಮತ್ತು ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಅಭಿಯಾನವು ಬೆಂಗಳೂರನ್ನು ಸ್ವಚ್ಛ ಮತ್ತು ಅಂದವಾದ ನಗರವನ್ನಾಗಿ ಮಾಡುವ ಗುರಿ ಹೊಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us