ಮಲಗಿದ್ದ ಮಕ್ಕಳ ನಡುವೆಯೇ ಚಾಪೆಯಲ್ಲಿತ್ತು 5 ಅಡಿಯ ಬೃಹತ್ ನಾಗರಹಾವು! ಪ್ರಾಣಾಪಾಯದಿಂದ ಪುಟ್ಟ ಮಕ್ಕಳು ಜಸ್ಟ್ ಮಿಸ್

Updated on: Jul 04, 2026 | 7:36 AM

ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದ ಸಮೀಪದ ಗ್ರಾಮವೊಂದರಲ್ಲಿ ಮನೆಯೊಳಗೆ ಮಕ್ಕಳು ಮಲಗಿದ್ದ ಚಾಪೆಯಡಿಯೇ ಬೃಹತ್ ನಾಗರಹಾವೊಂದು ಆಶ್ರಯ ಪಡೆದಿದ್ದ ಆಘಾತಕಾರಿ ಘಟನೆ ನಡೆದಿದೆ. ಸಕಾಲದಲ್ಲಿ ಹಾವನ್ನು ಗಮನಿಸಿದ ಪೋಷಕರು ಉರಗ ರಕ್ಷಕರ ನೆರವು ಪಡೆದಿದ್ದರಿಂದ ಪುಟ್ಟ ಮಕ್ಕಳು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ನೆಲಮಂಗಲ, ಜುಲೈ 4: ಮನೆಯೊಳಗೆ ಪುಟ್ಟ ಮಕ್ಕಳು ಮಲಗಿದ್ದ ಚಾಪೆಯಲ್ಲೇ ಬೃಹತ್ ನಾಗರಹಾವೊಂದು ಅಡಗಿದ್ದ ಅತ್ಯಂತ ಆಘಾತಕಾರಿ ಮತ್ತು ಮೈ ಜುಂ ಎನ್ನಿಸುವ ಘಟನೆಯೊಂದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದ ಬಳಿಯ ಗುಡ್ಡದಹಳ್ಳಿಯಲ್ಲಿ ನಡೆದಿದೆ. ಮಕ್ಕಳು ನಿರಾಳವಾಗಿ ಮಲಗಿದ್ದ ಚಾಪೆಯ ಕೆಳಗೆ ಬರೋಬ್ಬರಿ 5 ಅಡಿ ಉದ್ದದ ನಾಗರಹಾವು ಸೇರಿಕೊಂಡಿತ್ತು. ಇದನ್ನು ತಡವಾಗಿ ಗಮನಿಸಿದ ಪೋಷಕರು ಒಂದು ಕ್ಷಣ ತೀವ್ರ ಕಂಗಾಲಾಗಿದ್ದಾರೆ. ತಕ್ಷಣವೇ ವನ್ಯಜೀವಿ ಸಂರಕ್ಷಣಾ ಪ್ರತಿಷ್ಠಾನದ ಉರಗ ರಕ್ಷಕರಾದ ಪ್ರಶಾಂತ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಉರಗ ರಕ್ಷಕ ಪ್ರಶಾಂತ್, ಅತ್ಯಂತ ಚಾಣಾಕ್ಷತನದಿಂದ ಕಾರ್ಯಾಚರಣೆ ನಡೆಸಿ ನಾಗರಹಾವನ್ನು ಸುರಕ್ಷಿತವಾಗಿ ಸೆರೆಹಿಡಿದಿದ್ದಾರೆ. ಉರಗ ರಕ್ಷಕರ ಸಕಾಲಿಕ ಸ್ಪಂದನೆಯಿಂದಾಗಿ ಪುಟ್ಟ ಮಕ್ಕಳು ಜೀವಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಹಾವನ್ನು ಹಿಡಿಯುವ ರೋಮಾಂಚನಕಾರಿ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ.

ವಿಡಿಯೋ, ವರದಿ: ಮಂಜುನಾಥ್, ಟಿವಿ9, ನೆಲಮಂಗಲ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More