Loading video

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್, ವಿಡಿಯೋ ವೈರಲ್

| Updated By: ಗಂಗಾಧರ​ ಬ. ಸಾಬೋಜಿ

Updated on: Apr 07, 2025 | 9:22 AM

ಬೆಂಗಳೂರಿನ ಯಲಹಂಕದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿರುವಂತಹ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಕೂಡ ವೈರಲ್ ಆಗಿದೆ. ಸಾಮಾಜಿಕ ಕಾರ್ಯಕರ್ತರಿಂದ ಹಕ್ಕು ಮತ್ತು ಶಿಕ್ಷಣ ಇಲಾಖೆಗೆ ದೂರು ನೀಡಿದ್ದು, ಮುಖ್ಯ ಶಿಕ್ಷಕಿ ಮತ್ತು ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ದೇವನಹಳ್ಳಿ, ಏಪ್ರಿಲ್​ 07: ಪ್ರೌಢಶಾಲೆ ಮಕ್ಕಳಿಂದ (students) ಶಾಲಾ ಶೌಚಾಲಯ ಸ್ವಚ್ಛಗೊಳಿಸಿದ ಆರೋಪ ಕೇಳಿಬಂದಿದೆ. ಬೆಂಗಳೂರಿನ ಯಲಹಂಕ ಸರ್ಕಾರಿ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ. ಮಕ್ಕಳು ಶೌಚಾಲಯದ ಮುಂದೆ ಸ್ವಚ್ಛ ಮಾಡುವ ವಿಡಿಯೋ ವೈರಲ್ ಆಗಿದೆ. ಶಾಲಾ ಮಕ್ಕಳಿಗೆ ಶೌಚಾಲಯ ಕ್ಲೀನಿಂಗ್ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಬೆಳ್ತೂರು ಪರಮೇಶ್​ರಿಂದ ಮಾನವ ಹಕ್ಕು ಮತ್ತು ಶಿಕ್ಷಣ ಇಲಾಖೆಗೆ ದೂರು ನೀಡಲಾಗಿದೆ. ಮುಖ್ಯ ಶಿಕ್ಷಕಿ, ಕ್ಲೀನಿಂಗ್ ಮಾಡಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.