ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
Bengaluru Weather Update: ಬೆಂಗಳೂರು ಮಹಾನಗರದಲ್ಲಿ ಪ್ರಸ್ತುತ ತಂಪಾದ ಮತ್ತು ಮೋಡ ಕವಿದ ವಾತಾವರಣವಿದೆ. ಇಡೀ ನಗರದಾದ್ಯಂತ ಮೋಡಗಳಿಂದ ಆವೃತವಾಗಿದ್ದು, ತಂಪಾದ ಗಾಳಿ ಬೀಸುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮಧ್ಯಾಹ್ನದ ನಂತರವೂ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ನಗರದ ಕೆಲವೆಡೆ ಈಗಾಗಲೇ ತುಂತುರು ಮಳೆಯಾಗಿದೆ.
ಬೆಂಗಳೂರು, ಡಿಸೆಂಬರ್ 05: ನಗರದಾದ್ಯಂದ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಮನೆ ಮಾಡಿದ್ದು, ತಂಪಾದ ಗಾಳಿಯೂ ಆವರಿಸಿದೆ. ಕೆಲವು ಪ್ರದೇಶಗಳಲ್ಲಿ ತುಂತುರು ಮಳೆ ಕೂಡ ಆದ ಪರಿಣಾಮ ಸಿಲಿಕಾನ್ ಸಿಟಿ ಫುಲ್ ಕೂಲ್ ಕೂಲ್ ಆಗಿದೆ. ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಇಳಿಕೆ ಸಾಧ್ಯತೆ ಇದೆ ಎಂದು ಟಿವಿ9ಗೆ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
