ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!

Updated on: Aug 08, 2026 | 9:57 AM

ಹಾವನೂರು ಬಡಾವಣೆ ಮನೆಯೊಂದರಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆಯಾಗಿದ್ದು, ಆಶ್ಚರ್ಯ ಮೂಡಿಸಿದೆ. ಮೃತಪಟ್ಟು ಸುಮಾರು ಒಂದೂವರೆ ವರ್ಷದ ಬಳಿಕ ಅಸ್ಥಿಪಂಜರ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಹಾವನೂರು ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ದಾಕ್ಷಾಯಿಣಿ ಎಂಬ ಮಹಿಳೆ ಸಾವನ್ನಪ್ಪಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಒಂದೂವರೆ ವರ್ಷದ ಹಿಂದೆಯೇ ದಾಕ್ಷಾಯಿಣಿ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು, ಆಗಸ್ಟ್ 08: ಹಾವನೂರು ಬಡಾವಣೆ ಮನೆಯೊಂದರಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆಯಾಗಿದ್ದು, ಆಶ್ಚರ್ಯ ಮೂಡಿಸಿದೆ. ಮೃತಪಟ್ಟು ಸುಮಾರು ಒಂದೂವರೆ ವರ್ಷದ ಬಳಿಕ ಅಸ್ಥಿಪಂಜರ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಹಾವನೂರು ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ದಾಕ್ಷಾಯಿಣಿ ಎಂಬ ಮಹಿಳೆ ಸಾವನ್ನಪ್ಪಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಒಂದೂವರೆ ವರ್ಷದ ಹಿಂದೆಯೇ ದಾಕ್ಷಾಯಿಣಿ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಘಟನೆ ನಡೆದ ಮನೆಯ ಬಾಗಿಲು ಸಂಜೆ ತೆರೆದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಕಳವು ಮಾಡುವ ಉದ್ದೇಶದಿಂದ ಯಾರೋ ಮನೆಗೆ ನುಗ್ಗಿರಬಹುದು ಎಂದು ಶಂಕಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಗೆ ಬಂದು ಪರಿಶೀಲಿಸಿದಾಗ ಬಾತ್‌ರೂಂನಲ್ಲಿ ದಾಕ್ಷಾಯಿಣಿ ಅವರ ಅಸ್ಥಿಪಂಜರ ಪತ್ತೆಯಾಗಿದೆ. ಸದ್ಯ ಅಸ್ಥಿಪಂಜರವನ್ನು ಹೆಚ್ಚಿನ ವಿಧಿವಿಜ್ಞಾನ ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ರವಾನಿಸಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us