ಪ್ರಧಾನಿ ಮೋದಿ ಹುಟ್ಟುಹಬ್ಬದ ದಿನವೇ ಪಕೋಡಾ ಮಾಡಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್
ಮೋದಿ ನೇತೃತ್ವದ ಸರ್ಕಾರದ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಎಂದು ಪ್ರಧಾನಿ ಮೋದಿ ಹುಟ್ಟುಹಬ್ಬದ ದಿನವೇ ಯೂತ್ ಕಾಂಗ್ರೆಸ್ ಬೆಂಗಳೂರಿನಲ್ಲಿರುವ ಸಚಿವೆ ನಿರ್ಮಲಾ ಸೀತಾರಾಮನ್ ಕಛೇರಿ ಮುಂದೆ ಪ್ರತಿಭಟನೆಯನ್ನು ಮಾಡಿದ್ದಾರೆ. ಸಚಿವೆ ನಿರ್ಮಲಾ ಕಚೇರಿ ಮುಂದೆ ಪಕೋಡಾ ಮಾಡಿ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಯ ಭರವಸೆ ಈಡೇರಿಸಿಲ್ಲ ಅಂತ ಯುವ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿ (PM Narendra Modi) ಹುಟ್ಟುಹಬ್ಬದ ದಿನವೇ ಬೆಂಗಳೂರಿನಲ್ಲಿ ಯೂತ್ ಕಾಂಗ್ರೆಸ್ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ನಡೆಸಿದ್ದಾರೆ. ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಯ ಭರವಸೆ ಈಡೇರಿಸುತ್ತಿಲ್ಲ ಅಂತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕಚೇರಿಯ ಮುಂದೆ ಪಕೋಡಾ ಮಾಡಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಜೊತೆಗೆ ನಾವು ಈ ದಿನವನ್ನು ದೇಶಾದ್ಯಂತ ನಿರುದ್ಯೋಗ ದಿನವನ್ನಾಗಿ ಆಚರಿಸುತ್ತಿದ್ದೇವೆ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

