ಬೆಂಗಳೂರು: ರಾಜಕಾಲುವೆ ಮೇಲೆ ಯುವಕನ ಹುಚ್ಚಾಟ

Updated on: May 05, 2026 | 8:47 PM

ಬೆಂಗಳೂರಿನ ಉತ್ತರಹಳ್ಳಿ ಬಳಿ ಯುವಕನೊಬ್ಬ ರಾಜಕಾಲುವೆ ಗ್ರಿಲ್ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಹೈಡ್ರಾಮಾದಿಂದ ಸ್ಥಳದಲ್ಲಿ ಆತಂಕ ಮೂಡಿತ್ತು. ಸ್ಥಳೀಯ ಸಾರ್ವಜನಿಕರು ತಕ್ಷಣ ಕಾರ್ಯಪ್ರವೃತ್ತರಾಗಿ ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಿ ಸುಬ್ರಹ್ಮಣ್ಯಪುರ ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕನ ಈ ವರ್ತನೆಗೆ ಕಾರಣ ತಿಳಿಯಲು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರು, ಮೇ.5: ನಗರದ ಉತ್ತರಹಳ್ಳಿ ಬಳಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರಾಜಕಾಲುವೆಯ ಗ್ರಿಲ್ ಹತ್ತಿ ಭಾರಿ ಹುಚ್ಚಾಟ ನಡೆಸಿದ ಘಟನೆ ನಡೆದಿದೆ. ಯುವಕನ ಈ ಹೈಡ್ರಾಮಾದಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಉತ್ತರಹಳ್ಳಿ ಸಮೀಪದ ರಾಜಕಾಲುವೆಗೆ ಅಳವಡಿಸಲಾಗಿದ್ದ ಸುರಕ್ಷತಾ ಗ್ರಿಲ್ ಅನ್ನು ಹತ್ತಿದ ಯುವಕ, ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಯುವಕನ ಅಪಾಯಕಾರಿ ನಡವಳಿಕೆಯನ್ನು ಗಮನಿಸಿದ ಸ್ಥಳೀಯ ಸಾರ್ವಜನಿಕರು ತಕ್ಷಣ ಕಾರ್ಯಪ್ರವೃತ್ತರಾಗಿ ಆತನನ್ನು ಹಿಡಿದು ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಳೀಯರು ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಆತ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯ ಪೊಲೀಸರ ವಶದಲ್ಲಿದ್ದಾನೆ. ಯುವಕ ಈ ರೀತಿ ವರ್ತಿಸಲು ಕಾರಣವೇನು ಎಂಬ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More