AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮಣ್ಣ ಹೇಳಿಕೆಗೆ ದನಿಗೂಡಿಸಿದ ಡಿಸಿಎಂ ಪರಮೇಶ್ವರ್​​: ತುಮಕೂರಲ್ಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ಸೋಮಣ್ಣ ಹೇಳಿಕೆಗೆ ದನಿಗೂಡಿಸಿದ ಡಿಸಿಎಂ ಪರಮೇಶ್ವರ್​​: ತುಮಕೂರಲ್ಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

Jagadisha B
| Edited By: |

Updated on:Jul 22, 2026 | 11:29 AM

Share

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವಂತೆ ಆಗ್ರಹಿಸಿದ್ದಾರೆ. ತುಮಕೂರಿನಲ್ಲಿ ಏರ್‌ಪೋರ್ಟ್ ಸ್ಥಾಪನೆಗೆ 25 ವರ್ಷಗಳಿಂದಲೂ ಧ್ವನಿ ಎತ್ತುತ್ತಿದ್ದು, ಇದು 20 ಜಿಲ್ಲೆಗಳ ಹೆಬ್ಬಾಗಿಲಾಗಿರುವುದರಿಂದ ಅನುಕೂಲವಾಗಲಿದೆ. ಬಿಡದಿ ಸೇರಿದಂತೆ ಬೇರೆ ಬೇರೆ ಜಾಗಗಳನ್ನು ಗುರುತಿಸಿದ್ದರೂ, ತುಮಕೂರಿಗೆ ಅವಕಾಶ ಸಿಕ್ಕರೆ ಅದು ನಗರದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದವರು ತಿಳಿಸಿದ್ದಾರೆ.

ತುಮಕೂರು, ಜುಲೈ 22: ಬೆಂಗಳೂರು ಸಮೀಪ ಎರಡನೇ ವಿಮಾನ ನಿಲ್ದಾಣ ನಿರ್ಮಿಸುವ ಬದಲು ತುಮಕೂರು ಜಿಲ್ಲೆಯ ಶಿರಾದಲ್ಲಿ ಸ್ಥಾಪಿಸಬೇಕು ಎಂಬ ಕೇಂದ್ರ ಸಚಿವ ವಿ. ಸೋಮಣ್ಣ ಅವರ ಆಗ್ರಹದ ನಡುವೆ ಕರ್ನಾಟಕದ ಡಿಸಿಎಂ ಪರಮೇಶ್ವರ್​​ ಕೂಡ ಇದೇ ರೀತಿ ಅಭಿಪ್ರಾಯಪಟ್ಟಿದ್ದಾರೆ. ಅಂತಾರಾಷ್ಟ್ರೀಯ ಏರ್‌ಪೋರ್ಟ್​​ಮನ ತುಮಕೂರಿನಲ್ಲಿ ನಿರ್ಮಿಸಿ ಅಂತಾ 25 ವರ್ಷಗಳಿಂದ ಹೇಳುತ್ತಿದ್ದೇನೆ. ಆ‌ ಮೇಲೆ ಬಿಡಿದಿ ಸೇರಿದಂತೆ ಬೇರೆಬೇರೆ ಜಾಗ ಗುರುತಿಸಿದ್ದಾರೆ. ತುಮಕೂರು 20 ಜಿಲ್ಲೆಗಳ ಹೆಬ್ಬಾಗಿಲು, ನಮಗೂ ಅನುಕೂಲವಾಗುತ್ತೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 22, 2026 11:28 AM

Follow Us