ಬೆಂಗಳೂರಿನಲ್ಲಿ ವಿಚಿತ್ರ ಮನೆ: 3*20 ಅಡಿಯಲ್ಲಿ 4 ಅಂತಸ್ತಿನ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ 3*20 ಅಡಿಯ ಅಕ್ರಮ 4 ಅಂತಸ್ತಿನ ಮನೆ ತೀವ್ರ ಆತಂಕ ಸೃಷ್ಟಿಸಿದೆ. ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ನಿರ್ಮಿಸಿರುವ ಈ ಕಟ್ಟಡದಿಂದ ಪಕ್ಕದ ಮನೆಗೂ ಹಾನಿಯಾಗಿದೆ, ನಿವಾಸಿಗಳು ಜೀವಭಯದಲ್ಲಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರ ಸುರಕ್ಷತೆಗೆ ಅಪಾಯ ಒದಗಿದ್ದು, ಇದು ಜಿಬಿಎ ಅಧಿಕಾರಿಗ ಕಾರ್ಯವೈಖರಿಯನ್ನು ಪ್ರಶ್ನಿಸುತ್ತದೆ.
ಬೆಂಗಳೂರು, ಮೇ 12: ಬ್ರ್ಯಾಂಡ್ ಬೆಂಗಳೂರಿನಲ್ಲಿ ಯಾರು ಬೇಕಾದರೂ, ಹೇಗೆ ಬೇಕಾದರೂ ಮನೆ ಕಟ್ಟಬಹುದೇ? ಎಂಬ ಪ್ರಶ್ನೆಗೆ ರಾಜರಾಜೇಶ್ವರಿ ನಗರದ ಜವರೇಗೌಡ ನಗರದಲ್ಲಿ ತಲೆ ಎತ್ತಿರುವ ವಿಚಿತ್ರ ಕಟ್ಟಡ ಇದಕ್ಕೆ ಸಾಕ್ಷಿ ಎನ್ನುವಂತಿದೆ. ಕೇವಲ 3*20 ಅಡಿ ಜಾಗದಲ್ಲೇ ಬರೋಬ್ಬರಿ 4 ಮಹಡಿ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಸದ್ಯ ನೋಡುಗರನ್ನು ಆಶ್ಚರ್ಯಕ್ಕೀಡು ಮಾಡಿದೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಈ ವಿಚಿತ್ರ ಕಟ್ಟಡದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಟೀಕೆಗಳು ಕೇಳಿಬರುತ್ತಿದ್ದರು ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯವಹಿಸಿದ್ದಾರೆ. ಇನ್ನು ಈಗಾಗಲೇ ಕಟ್ಟಡದ ಕೆಳಭಾಗ ಹಾಗೂ ಮುಂಭಾಗ ಕುಸಿದಿದ್ದು, ಯಾವ ಕ್ಷಣದಲ್ಲಾದರೂ ಸಂಪೂರ್ಣ ಕುಸಿಯುವ ಆತಂಕ ಎದುರಾಗಿದೆ. ಇದರಿಂದ ಪಕ್ಕದ ಮನೆಗೂ ಅಪಾರ ಪ್ರಮಾಣದ ಹಾನಿಯಾಗಿದ್ದು, ನಿವಾಸಿಗಳು ಕಳೆದ ಹಲವು ವರ್ಷಗಳಿಂದ ಜೀವಭಯದಲ್ಲೇ ವಾಸಿಸುವಂತಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: May 12, 2026 05:55 PM
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು

