‘ಪೊಲೀಸ್ ಠಾಣೆಗಳಲ್ಲಿ ಇನ್ಮುಂದೆ ‘ಸೆಟ್ಲ್‌ಮೆಂಟ್’ ಇಲ್ಲ’: ನೂತನ ಚೀಫ್ ಕಮಿಷನರ್ ಆರ್. ಹಿತೇಂದ್ರ ಖಡಕ್ ವಾರ್ನಿಂಗ್
ಬೆಂಗಳೂರಿನ ನೂತನ ಮುಖ್ಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಆರ್. ಹಿತೇಂದ್ರ, ಟಿವಿ9 ಜೊತೆ ವಿಶೇಷ ಸಂದರ್ಶನ ನೀಡಿದ್ದಾರೆ. ನಗರದ ಮೊದಲ ಮುಖ್ಯ ಆಯುಕ್ತರಾಗಿ ಕಾರ್ಯಭಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ, ಜನರ ನಿರೀಕ್ಷೆಗಳು ಮತ್ತು ಮುಂಬರುವ ಸವಾಲುಗಳ ಬಗ್ಗೆಯೂ ಮಾತನಾಡಿದ್ದಾರೆ. ಪೊಲೀಸ್ ಠಾಣೆಗಳಲ್ಲಿ ಇನ್ನು ಯಾವುದೇ ಇತ್ಯರ್ಥವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು, ನವೆಂಬರ್ 21: ಬೆಂಗಳೂರು ನಗರಕ್ಕೆ ಹೊಸ ಮುಖ್ಯ ಆಯುಕ್ತರಾಗಿ ನೇಮಕಗೊಂಡಿರುವ ಆರ್. ಹಿತೇಂದ್ರ ಅವರು ಟಿವಿ9 ಕನ್ನಡದೊಂದಿಗೆ ವಿಶೇಷ ಸಂದರ್ಶನ ನೀಡಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಬಂದ ಅವರು, ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ. ಬೆಂಗಳೂರು ನಗರಕ್ಕೆ ಮೊದಲ ಚೀಫ್ ಕಮಿಷನರ್ ಆಗಿ ನೇಮಕಗೊಂಡಿರುವುದು ಸಂತೋಷ ತಂದಿದೆ ಎಂದು ಹೇಳಿದ್ದಾರೆ.
ಆದರೆ, ಈ ಹೊಸ ವ್ಯವಸ್ಥೆ ಮತ್ತು ಜನರ ನಿರೀಕ್ಷೆಗಳು ದೊಡ್ಡದಾಗಿವೆ. ಮುಂಬರುವ ಕಾರ್ಯಗಳನ್ನು ನೆನೆಸಿಕೊಂಡಾಗ ಸವಾಲುಗಳೂ ಇವೆ ಎಂದು ಹಿತೇಂದ್ರ ಅವರು ತಿಳಿಸಿದ್ದಾರೆ. ಸರ್ಕಾರವು ಬೆಂಗಳೂರು ನಗರಕ್ಕೆ ಐವರು ಕಮಿಷನರ್‌ಗಳು ಮತ್ತು ಒಬ್ಬ ಮುಖ್ಯ ಆಯುಕ್ತರನ್ನು ನೇಮಕ ಮಾಡಿದೆ. ತಮ್ಮ ಆಡಳಿತದಲ್ಲಿ ಪೊಲೀಸ್ ಠಾಣೆಗಳಲ್ಲಿ ಇನ್ನು ಯಾವುದೇ ಇತ್ಯರ್ಥವಿಲ್ಲ ಎಂದು ಅವರು ಸ್ಪಷ್ಟ ಸಂದೇಶ ನೀಡಿದ್ದಾರೆ. ಪಾರದರ್ಶಕತೆ ಮತ್ತು ಕಾನೂನುಬದ್ಧ ಆಡಳಿತ ತಮ್ಮ ಆದ್ಯತೆ ಎಂದು ಪ್ರತಿಪಾದಿಸಿದ್ದಾರೆ. ನಗರದಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಣ, ಮಹಿಳೆಯರ ಸುರಕ್ಷತೆ ಮತ್ತು ಸಂಚಾರ ನಿರ್ವಹಣೆಯಂತಹ ಪ್ರಮುಖ ವಿಷಯಗಳ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

